ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಮೀನುಗಳಿಗೆ ಹೋಗುವ ದಾರಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಕಳೆದ ಮೂರು ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹಳ್ಳಿಗಳಲ್ಲಿ ಹೊಲಗಳಿಗೆ ಹೋಗಲು ದಾರಿ ಇಲ್ಲದೇ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೊಲದ ದಾರಿಗಾಗಿ ಹೊಡೆದಾಟ, ಕೊಲೆಗಳು ನಡೆದಿವೆ. ಇದನ್ನು ತಕ್ಷಣ ಪರಿಹರಿಸಬೇಕು. ಬ್ರಿಟಿಷ್ ಕಾಲದಿಂದ ಜಮೀನುಗಳ ಸರ್ವೆ ಕಾರ್ಯ ನಡೆದಿಲ್ಲ. ಪ್ರತಿ 30 ವರ್ಷಕ್ಕೊಮ್ಮೆ ಮೋಜಣಿ ಮಾಡಿ ಜಮೀನಿನ ಹದ್ದು ಗುರುತಿಸಬೇಕು. ಫಸಲ್ ಭೀಮಾ ಯೋಜನೆ ರಾಜ್ಯದಲ್ಲಿ ಸರಿಯಾಗಿ ಅನುಷ್ಠಾನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಬಳೀಕ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರಿಗೆ ಮನವಿ ಸಲ್ಲಿಸಿ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.