ವಿಜಯಪುರ: ಸಾಲಬಾಧೆಗೆ ರೈತನೊಬ್ಬ ವಿದ್ಯುತ್ ತಂತಿ ಹಿಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಠ್ಠಲ ಶ್ರೀಪತಿ ಜಾಧವ (56) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದ್ದಾರೆ. ಸಿಂಡಿಕೇಟ್ ಬ್ಯಾಂಕ್‌ನಲ್ಲಿ 1.50 ಲಕ್ಷ ಬೆಳೆ ಸಾಲ ಪಡೆದಿದ್ದರು. ಸಕಾಲಕ್ಕೆ ಮಳೆಯಾಗಿದ ಕಾರಣ ಸಾಲದ ಹೊರೆಯಿಂದಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇಂಡಿ ಗ್ರಾಮಾಂತರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.