ಮುದ್ದೇಬಿಹಾಳ (ವಿಜಯಪುರ): ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಪತ್ರಕರ್ತರು ಹಾಗೂ ಕೊರೊನಾ ವಾರಿಯರ್ಸ್ ಸನ್ಮಾನಿಸಲಾಗುವುದು ಎಂದು ತಹಶೀಲ್ದಾರ್ ಜಿ.ಎಸ್.ಮಳಗಿ ತಿಳಿಸಿದ್ದಾರೆ.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೂಚನೆ ನೀಡಿದ್ದು, ಹಲವು ಮಾರ್ಗಸೂಚಿ ಕ್ರಮಗಳನ್ನು ನೀಡಿದೆ. ಅದರಂತೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್ ಹಾಗು ಸ್ಯಾನಿಟೈಸರ್ ಅನ್ನು ಕಡ್ಡಾಯಗೊಳಿಸಲಾಗಿದೆ ಎಂದರು.
ಈ ವೇಳೆ ಕೊರೊನಾ ಸಂಕಷ್ಟದ ಸಮಯದಲ್ಲಿ ವಾರಿಯರ್ಸ್ಗಳಾಗಿ ತಾಲೂಕಾಡಳಿತದೊಂದಿಗೆ ಸೇವೆ ಸಲ್ಲಿಸಿದ ಪತ್ರಕರ್ತರು ಹಾಗೂ ಕೊರೊನಾ ವಾರಿಯರ್ಸ್ಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.