ಮುದ್ದೇಬಿಹಾಳ: ವಿದ್ಯುತ್ ವಾಟರ್ ಹೀನರ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಮನೆಗೆ ಬೆಂಕಿ ಹೊತ್ತಿಕೊಂಡ ಘಟನೆ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.
ಆಶ್ರಯ ಕಾಲೋನಿಯ ನಿವಾಸಿ ಮೆಹಬೂಬ್ ಸಲೀಂ ಮುಲ್ಲಾ ಎಂಬುವರ ಮನೆಯಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್ ವಾಟರ್ ಹೀಟರ್ ಓವರ್ ಹೀಟ್ ಆಗಿ ಶಾಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗ್ತಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ದಿನ ಬಳಕೆ ವಸ್ತುಗಳು, ಬಟ್ಟೆ ಬರೆ, ಆಹಾರ ಧಾನ್ಯ ಸುಟ್ಟು ಭಸ್ಮವಾಗಿವೆ. ದುರ್ಘಟನೆಯಿಂದ ಅಂದಾಜು 2.50 ಲಕ್ಷ ರೂ. ಹಾನಿ ಸಂಭವಿಸಿದೆ ಎಂದು ಮನೆಯ ಮಾಲೀಕರು ತಿಳಿಸಿದ್ದಾರೆ. ಘಟನೆ ನಡೆದ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
ತಪ್ಪಿದ ಭಾರೀ ಅನಾಹುತ: ಬೆಂಕಿ ಹೊತ್ತಿಕೊಂಡ ಸಂದರ್ಭ ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳಿದ್ದವು. ಅವುಗಳಿಗೆ ಏನಾದರು ಬೆಂಕಿ ತಗುಲಿದ್ದರೆ ದೊಡ್ಡ ಮಟ್ಟದ ಅಪಾಯ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಏನೂ ಆಗಿಲ್ಲ ಎಂದು ಅಗ್ನಿಶಾಮಕ ಠಾಣೆಯ ಅಧಿಕಾರಿ ಪ್ರಮೋದ್ ಬಿ.ಎಸ್. ಹೇಳಿದ್ದಾರೆ.