ETV Bharat / state

ಭೀಮಾ ತೀರದ ಮಹಾದೇವ ಸಾಹುಕಾರ ಮೇಲೆ ಗುಂಡಿನ ದಾಳಿ - ವಿಜಯಪುರ ಲೇಟೆಸ್ಟ್ ಅಪರಾಧ ಸುದ್ದಿ

ಭೀಮಾ ತೀರದ ಮಹಾದೇವ ಸಾಹುಕಾರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್ ಸ್ಪಷ್ಟಪಡಿಸಿದ್ದಾರೆ.

mahadeva sahukara bhairagonda
ಮಹಾದೇಹ ಸಾಹುಕಾರ ಭೈರಗೊಂಡ
author img

By

Published : Nov 2, 2020, 5:08 PM IST

ವಿಜಯಪುರ: ಭೀಮಾ ತೀರದ ಮಹಾದೇವ ಸಾಹುಕಾರ ಭೈರಗೊಂಡ ಮೇಲೆ ಗುಂಡಿನ ದಾಳಿ ಜತೆಗೆ ಜೆಸಿಬಿ ಮೂಲಕ ಹತ್ಯೆ ಮಾಡಲು ಯತ್ನಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್‌ ಅಗರವಾಲ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಅರಕೇರಿ ತಾಂಡಾ ಬಳಿ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ ಎನ್ನಲಾಗಿದ್ದು, ಮಹಾದೇವ ಸಾಹುಕಾರ ಹಾಗೂ ಆತನ ಜೊತೆಗಿದ್ದ ಬಾಬುರಾಯ ಎಂಬುವರಿಗೂ ಗಾಯವಾಗಿದೆ. ಈಗ ಸದ್ಯಕ್ಕೆ ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಗೆ ದಾಖಲಾದ ಮಹಾದೇಹ ಸಾಹುಕಾರ ಭೈರಗೊಂಡ

ಮಹಾದೇವ ಸಾಹುಕಾರ ಸಂಚರಿಸುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಬಳಿಕ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ. ಮಹಾದೇವ ಸಾಹುಕಾರ ಭೈರಗೊಂಡಗೆ ಎರಡು ಗುಂಡುಗಳು ತಾಗಿದ್ದು, ಬಾಬುರಾಯಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.