ವಿಜಯಪುರ: ಕೊರೊನಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡಲಾಗಿದೆ. ಇದುವರೆಗೆ 76 ಜನ ವಿದೇಶದಿಂದ ಜಿಲ್ಲೆಗೆ ಮರಳಿ ಬಂದಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಅಧಿಕಾರಿಗಳೊಂದಿಗೆ 7 ಸಭೆ ನಡೆಸಲಾಗಿದ್ದು, ಇದುವರೆಗೂ ಯಾವುದೇ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಇರುವುದು ಖಚಿತವಾಗಿಲ್ಲ. ಸರ್ಕಾರದ ಆದೇಶಗಳನ್ನು ಜಿಲ್ಲೆಯಲ್ಲಿ ಪಾಲಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಗೋಲ್ ಗುಂಬಜ್‌ಗೆ ಪ್ರವಾಸಿಗರ ಭೇಟಿ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವರಿಗೆ ಮನವರಿಗೆ ಮಾಡಿದರು.
ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ್, ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಕಾರ್ಯ ನಿರ್ವಹಿಸುತ್ತಿರುವುದಕ್ಕೆ ಅಭಿನಂದನೆಗಳು. ಆರೋಗ್ಯ ಇಲಾಖೆ ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯ ನಿರ್ವಹಣೆ ಮಾಡಲು ಸಿದ್ಧರಾಗಿಬೇಕು. ಕರ್ತವ್ಯದ ಮಧ್ಯೆ ಅನಗತ್ಯವಾಗಿ ರಜೆ ತಗೆದುಕೊಳ್ಳಬೇಡಿ ಎಂದು ಸಚಿವರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿದರು.
ಇನ್ನು ಪತ್ರಕರ್ತರು ಯಾವುದೇ ಅಧಿಕಾರಿಗಳು ಹೇಳಿದ್ರು ಅಂತಾ ಸುದ್ದಿ ನೀಡಬೇಡಿ, ಜಿಲ್ಲಾಧಿಕಾರಿಯಿಂದ ವರದಿ ಪಡೆದು ಸುದ್ದಿ ಬಿತ್ತರಿಸಿ ಎಂದು ಪತ್ರಕರ್ತರಿಗೆ ಸಚಿವ ಸಿ.ಸಿ. ಪಾಟೀಲ್ ಕಿವಿ ಮಾತು ಹೇಳಿದರು.