ETV Bharat / state

ಜೆಡಿಎಸ್‌ ಮಿಷನ್-123 ತರಲು ಉಪಚುನಾವಣೆ ವೇದಿಕೆ: ಹೆಚ್.ಡಿ.ಕುಮಾರಸ್ವಾಮಿ

author img

By

Published : Oct 27, 2021, 1:10 PM IST

ನಮ್ಮ ಅಭ್ಯರ್ಥಿ ನಾಜಿಯಾ ಅಂಗಡಿ ಕಳೆದ 6 ತಿಂಗಳಿಂದ ಪ್ರತಿ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಹೀಗಾಗಿ ಸಿಂದಗಿ ಮತಕ್ಷೇತ್ರದಲ್ಲಿ ಜೆಡಿಎಸ್​ನಿಂದ ಉತ್ತಮ ಫಲಿತಾಂಶ ನಿರೀಕ್ಷಿಸಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Former CM HD Kumaraswamy
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ

ವಿಜಯಪುರ: ಮುಂದಿನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 'ಜೆಡಿಎಸ್ ಮಿಷನ್-123' ತರಲು ಈ ಉಪಚುನಾವಣೆ ವೇದಿಕೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು‌.

ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಅಭ್ಯರ್ಥಿ ನಾಜಿಯಾ ಅಂಗಡಿ ಕಳೆದ 6 ತಿಂಗಳಿಂದ ಪ್ರತಿ ಹಳ್ಳಿಗಳಿಗೆ ತೆರಳಿ ಜನರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಹೀಗಾಗಿ ಸಿಂದಗಿ ಮತಕ್ಷೇತ್ರದಲ್ಲಿ ಜೆಡಿಎಸ್​ಉತ್ತಮ ಫಲಿತಾಂಶ ನಿರೀಕ್ಷಿಸುತ್ತಿದೆ ಎಂದರು.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಿಂದಗಿ ಕ್ಷೇತ್ರದಲ್ಲಿ ನೀರಾವರಿ ಯೋಜನೆ ತಂದು ಉತ್ತಮ ಕೆಲಸ ಮಾಡಿದ್ದಾರೆ. ರೈತರು ಸಹ ಗೌಡರು ಮಾಡಿದ ಕೆಲಸದಿಂದ ಇಂದು ನೆಮ್ಮದಿಯಾಗಿ ಊಟ ಮಾಡುತ್ತಿದ್ದೇವೆ ಎನ್ನುತ್ತಿದ್ದಾರೆ. ಕ್ಷೇತ್ರದಲ್ಲಿ ಜಾತಿಭೇದ ಮೆರೆತು ಜೆಡಿಎಸ್​​ಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಣ ಹಂಚುವುದೇ ನಿಮ್ಮ ಆಟವೇ?:

ಸಚಿವ ಸೋಮಣ್ಣ ಇನ್ನೇನಿದ್ದರೂ ಜೆಡಿಎಸ್​​ನದ್ದು ಸಂಜೆಯವರಿಗೆ ಮಾತ್ರ. ಮುಂದೆ ನಮ್ಮ ಆಟ ಎನ್ನುತ್ತಿದ್ದಾರೆ. ಇದರ ಅರ್ಥ ಬಿಜೆಪಿ ಹಣ ಹಂಚಿ ಮತ ಖರೀದಿಸುವ ತಯಾರಿಯಲ್ಲಿದೆ ಎಂಬ ಸಂಶಯ ವ್ಯಕ್ತವಾಗಿದೆ ಎಂದರು.‌ ಜೆಡಿಎಸ್​​ಗೆ ಮತ ಹಾಕಿದರೆ, ಅದು ಬಿಜೆಪಿಗೆ ಹಾಕಿದಂತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದನ್ನು ಪದೇ ಪದೇ ಹೇಳುತ್ತಲೇ ಬಂದಿದ್ದಾರೆ. ಅದೇನು ಗಾದೆ ಇದೆಯಲ್ಲ ಹಾಡಿದ್ದೇ ಹಾಡೋ ಕಿಸಬಾಯಿ ದಾಸ್ ಎನ್ನುವಂತಾಗಿದೆ. ಇದರಿಂದ ಮುಸ್ಲಿಮರು ಬೇಸತ್ತು ಹೋಗಿದ್ದಾರೆ ಎಂದು ಟಾಂಗ್​​ ನೀಡಿದರು.

ಇದನ್ನೂ ಓದಿ: ನಾನೂ ಸಹ ದೇವೇಗೌಡರ ಗರಡಿಯಲ್ಲಿಯೇ ಬೆಳೆದವನು: ಸಚಿವ ವಿ.ಸೋಮಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.