ವಿಜಯಪುರ: ಎದುರುಗಡೆ ಬಂದ್ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ತಾಲೂಕಿನ ಸಿಂದಗಿ ರಸ್ತೆಯ ಲಕ್ಷ್ಮಿ ದೇಗುಲ ಬಳಿ ತಡರಾತ್ರಿ ನಡೆದಿದೆ.

ಮಾಜಿ ಗ್ರಾಪಂ ಸದಸ್ಯ ಮೋಹನ್ ರಾಠೋಡ್ (42) ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಮೃತ ಬೈಕ್ ಸವಾರ ಹಡಗಲಿ ಎಲ್.ಟಿ ಗ್ರಾಮದ ನಿವಾಸಿಯಾಗಿದ್ದು, ಸಂಜೆ ವಿಜಯಪುರದಿಂದ ಹಡಗಲಿಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಓದಿ: ಫೆಡರಲ್ ಬ್ಯಾಂಕ್ ನೀತಿ ಭೀತಿ.. ಶೇ 1 ರಷ್ಟು ಕುಸಿತ ಕಂಡ ಮುಂಬೈ ಷೇರುಪೇಟೆ
ಸಿಂದಗಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಕಾರೊಂದು ಇವರ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೋಹನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ