ವಿಜಯಪುರ: ಮಾಜಿ ಆರೋಗ್ಯ ಸಚಿವ ಹಾಗೂ ಹಾಲಿ ಬಸವನಬಾಗೇವಾಡಿ ಕ್ಷೇತ್ರದ ಶಾಸಕ ಶಿವಾನಂದ ಪಾಟೀಲ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಕಳೆದ 2-3 ದಿನಗಳಿಂದ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋವಿಡ್ ಸ್ಯ್ವಾಬ್ ಟೆಸ್ಟ್ ಮಾಡಿಸಿದಾಗ, ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆ ಏಳು ದಿನಗಳ ಕಾಲ ಹೋಮ್ ಐಸೋಲೇಷನ್ನಲ್ಲಿ ಇರುವಂತೆ ಅವರಿಗೆ ವೈದ್ಯರು ಸೂಚಿಸಿದ್ದಾರೆ.
ಇದನ್ನೂ ಓದಿ: ಲಸಿಕಾಕರಣ ಚುರುಕುಗೊಳಿಸಿ: ಜಿಲ್ಲಾಡಳಿತಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ತಮ್ಮ ಜತೆ ಸಂಪರ್ಕಕ್ಕೆ ಬಂದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಸಲಹೆ ನೀಡಿದ್ದಾರೆ. ಅಲ್ಲದೇ ಬಸವನಬಾಗೇವಾಡಿ ಕ್ಷೇತ್ರದ ಜನರನ್ನು ಒಂದು ವಾರದ ನಂತರ ಭೇಟಿಯಾಗುವುದಾಗಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.