ETV Bharat / state

ಪರಿವಾರ, ತಳವಾರ ಸಮುದಾಯಕ್ಕೆ ಪ್ರಮಾಣ ಪತ್ರ ನೀಡಿ; ಎಸ್​ಕೆ ಬೆಳ್ಳುಬ್ಬಿ - Former minister Belubbi appeal to govt

ಮಾಜಿ ಸಚಿವ ಎಸ್‌ಕೆ ಬೆಳ್ಳುಬ್ಬಿ ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Vijayapura
Vijayapura
author img

By

Published : Jul 24, 2020, 4:35 PM IST

ವಿಜಯಪುರ: ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ನೀಡುವಂತೆ ಮಾಜಿ ಸಚಿವ ಎಸ್‌ಕೆ ಬೆಳ್ಳುಬ್ಬಿ ಮನವಿ ಸಲ್ಲಿಸಿದರು.

ಎಸ್‌ಟಿ ಪಟ್ಟಿಗೆ ಸೇರಲು ಪರಿವಾರ ಹಾಗೂ ತಳವಾರ ಸಮುದಾಯಗಳು ಹಲವು ವರ್ಷಗಳ ಕಾಲ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅದರ ಫಲವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಎರಡು ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆದೇಶ ಹೊರಡಿಸಿವೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಆದೇಶಗೊಂಡ ಸಮುದಾಯಗಳಿಗೆ ಇನ್ನೂ ಪ್ರಮಾಣ ಪತ್ರ ವಿತರಣೆ ಮಾಡಿಲ್ಲ. ಸಮುದಾಯಗಳಿಗೆ ಬೇಗ ಪ್ರಮಾಣ ಪತ್ರ ನೀಡುವಂತೆ ಜಿಲ್ಲಾಧಿಕಾರಿಗೆ ತಿಳಿಸಿದರು‌.

ತಳವಾರ ಹಾಗೂ ಪರಿವಾರ ಸಮುದಾಯಗಳು ಆರ್ಥಿಕವಾಗಿ ಹಿಂದುಳಿದಿದ್ದು, ಈಗ ಎಸ್​​ಟಿ ಪಟ್ಟಿಗೆ ಸೇರ್ಪಡೆಯಾಗಿರುವುದರಿಂದ ಸರ್ಕಾರಿ ನೌಕರಿ ಸೇರಿದಂತೆ ಇನ್ನಿತರ ಸರ್ಕಾರಿ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ. ಆದರೆ ಇದಕ್ಕಾಗಿ ಕೂಡಲೇ ಎಸ್​ಟಿ ಪ್ರಮಾಣ ಪತ್ರ ನೀಡುವುದು ಅಗತ್ಯ ಎಂದು ಬೆಳ್ಳುಬ್ಬಿ ಹೇಳಿದರು.

ಪ್ರಮಾಣ ಪತ್ರ ನೀಡಲು ಉಂಟಾಗಿರುವ ಗೊಂದಲಗಳನ್ನು ಶೀಘ್ರ ನಿವಾರಿಸಿ, ಪರಿವಾರ ಹಾಗೂ ತಳವಾರ ಸಮುದಾಯಗಳಿಗೆ ಎಸ್‌ಟಿ ಪ್ರಮಾಣ ಪತ್ರ ವಿತರಣೆ ಮಾಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.