ETV Bharat / state

ತೊಗರಿ ಬೆಳೆಗೆ ಬೆಂಬಲ ಬೆಲೆ ವಿಚಾರ: ರೈತರ ಮನವಿಗೆ ಸ್ಪಂದಿಸಿದ ವಿಜಯಪುರ ಡಿಸಿ

ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ವೀಕ್ಷಣೆ ನಡೆಸಿದ್ದಾರೆ.

author img

By

Published : Dec 21, 2019, 1:37 PM IST

formers-appeals-to-vijayapura-dc-support-prize-for-seeds
ತೊಗರಿ ಬೆಳೆಗೆ ಬೆಂಬಲ ಬೆಲೆ: ರೈತರ ಮನವಿಗೆ ಸ್ಫಂದಿಸಿದ ವಿಜಯಪುರ ಡಿಸಿ

ವಿಜಯಪುರ: ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ವೀಕ್ಷಣೆ ನಡೆಸಿದ್ದಾರೆ.

ತೊಗರಿ ಬೆಳೆಯಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದ್ದು, ಈ ಬಾರಿ ಹಿಂಗಾರು ಸುರಿದ ಪರಿಣಾಮ ಉತ್ತಮ ಇಳುವರಿ ಬಂದ ಹಿನ್ನೆಲೆ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಜಿಲ್ಲೆಯ 3.27 ಹೆಕ್ಟೇರ್ ಕೃಷಿ ಭೂಮಿಯಲ್ಲಿ ರೈತರು ತೊಗರಿ ಬೆಳೆದಿದ್ದು, ಉತ್ತಮ ಬೆಲೆ ನಿರೀಕ್ಷೆಯಲ್ಲಿದ್ದಾರೆ. ಕೇಂದ್ರ ಸರ್ಕಾರ ಕಳೆದ ವರ್ಷ 5675 ರೂ. ಬೆಂಬಲ ಬೆಲೆ ನೀಡಿ ಪ್ರತಿ ರೈತರಿಂದ ನೇರವಾಗಿ 10 ಕ್ವಿಂಟಾಲ್ ತೊಗರಿ ಖರೀದಿಗೆ ಮುಂದಾಗಿತ್ತು. ರಾಜ್ಯ ಸರ್ಕಾರ ಕೂಡ ಪ್ರೋತ್ಸಾಹಧನವಾಗಿ 425 ರೂ. ನೀಡಿ ಅಂತಿಮವಾಗಿ ಪ್ರತಿ ಕ್ವಿಂಟಾಲ್ ತೊಗರಿಗೆ 6100 ರೂ. ಬೆಲೆ ನೀಡಿ ಖರೀದಿ ಮಾಡಿತ್ತು.

ಈ ವರ್ಷ ತೊಗರಿ ಬೆಳೆಗೆ ಕೇಂದ್ರ ಸರ್ಕಾರ 5400 ರೂ. ಬೆಂಬಲ ಬೆಲೆ ಘೋಷಣೆ ಮಾಡಿದ್ದು‌, ಜಿಲ್ಲೆಯ ರೈತರು ರಾಜ್ಯ ಸರ್ಕಾರದ ಬೆಲೆಗೆ ಕಾದು ಕುಳಿತ್ತಿದ್ದಾರೆ. ಇನ್ನು ವಿಜಯಪುರ ಜಿಲ್ಲಾದ್ಯಾಂತ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ರೈತರ ಒತ್ತಾಯವಾಗಿದ್ದು, ಮಧ್ಯವರ್ತಿಗಳ ಹಾವಳಿಯಿಂದ ಸರಿಯಾದ ಬೆಲೆ ರೈತರ ಕೈ ಸೇರದಿರೋದಕ್ಕೆ ಜಿಲ್ಲೆಯ ರೈತರು ಆಕ್ರೋಶಗೊಂಡಿದ್ದಾರೆ. ಈ ವರ್ಷ ಸರ್ಕಾರ ರೈತರಿಂದ ನೇರವಾಗಿ ತೊಗರಿ ಖರೀದಿಸಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಖುದ್ದಾಗಿ ರೈತರ ಜಮೀನುಗಳಿಗೆ ತೆರಳಿ ತೊಗರಿ ಬೆಳೆ ವೀಕ್ಷಣೆ ಮಾಡಿದ್ದಾರೆ.

Intro:ವಿಜಯಪುರ Body:ವಿಜಯಪುರ: ತೊಗರಿ ಬೆಳೆಗೆ ಬೆಂಬಲ ಬೆಲೆ ನೀಡಿಬೇಕು ಎಂದು ಆಗ್ರಹಿಸಿ ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ರೈತರ ಹೊಲಗಳಿಗೆ ಇಂದು ಭೇಟಿ ನೀಡಿ ಬೆಳೆಗಳ ವೀಕ್ಷಣೆ ನಡೆಸಿದರು.
ವಿಜಯಪುರ ಜಿಲ್ಲೆ ತೊಗರಿ ಬೆಳೆಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿರುವ ಕಾರಣ ಜಿಲ್ಲೆಯಲ್ಲಿ ಹಿಂಗಾರು ಉತ್ತಮವಾಗಿ ಸುರಿದ ಪರಿಣಾಮ ತೊಗರಿ ಫಸಲು ಉತ್ತಮ ಇಳುವರಿ ಬಂದ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಈ ವರ್ಷ ಜಿಲ್ಲೆಯ ೩.೨೭ ಹೆಕ್ಟೇರ್ ಕೃಷಿ ಭೂಮಿಯಲ್ಲಿ ತೊಗರಿ ರೈತರು ಬೆಳೆದಿದ್ದಾರೆ.ಇನ್ನೂ ರೈತರ ತೊಗರಿ ಫಸಲಿಗೆ ಉತ್ತಮ ಬೆಲೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರಿದ್ದಾರೆ. ಕೇಂದ್ರ ಸರ್ಕಾರ ಕಳೆದ ವರ್ಷ ೫೬೭೫ ರೂ. ಬೆಂಬಲ ಬೆಲೆ ನೀಡಿ ಪ್ರತಿ ರೈತರಿಂದ ನೇರವಾಗಿ ೧೦ ಕ್ವಿಂಟಲ್ ತೊಗರಿ ಖರೀದಿಗೆ ಮುಂದಾಗಿತು.ರಾಜ್ಯ ಸರ್ಕಾರ ಕೊಡ ಪ್ರೋತ್ಸಾಹ ಧನವಾಗಿ ೪೨೫ ರೂ. ನೀಡಿ ಅಂತಿಮವಾಗಿ ಪ್ರತಿ ಕ್ವಿಂಟಲ್ ತೊಗರಿಗೆ ೬೧೦೦ ರೂ. ಬೆಲೆ ನೀಡಿ ಖರೀದಿ ಮಾಡಿತ್ತು.
ಈ ವರ್ಷ ತೊಗರಿ ಬೆಳೆಗೆ ಕೇಂದ್ರ ಸರ್ಕಾರ ೫೪೦೦ ರೂ. ಬೆಂಬಲ ಬೆಲೆ ಘೋಷಣೆ ಮಾಡಿದ್ದು‌ ಜಿಲ್ಲೆಯ ರೈತರು ರಾಜ್ಯ ಸರ್ಕಾರದ ಬೆಲೆಗೆ ಕಾದು ಕುಳಿತ್ತಿದ್ದಾರೆ.
ಇನ್ನೂ ವಿಜಯಪುರ ಜಿಲ್ಲಾದ್ಯಾಂತ ಪ್ರತಿ ಗ್ರಾಮ ಪಂಚಾಯಿತಗಳಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸುವಂತೆ ರೈತರ ಒತ್ತಾಯವಾಗಿದೆ. ಖರೀದಿ ಕೇಂದ್ರಗಳಲ್ಲಿ ಮಧ್ಯವರ್ತಿಗಳ ಹಾವಳಿ ಪ್ರಭಾವದಿಂದ ಸರಿಯಾದ ಬೆಲೆ ರೈತರ ಕೈಸೇರದಿರೋದಕ್ಕೆ ಜಿಲ್ಲೆಯ ರೈತರು ಆಕ್ರೋಶ ಗೊಂಡಿದ್ದಾರೆ. ಈ ವರ್ಷ ಸರ್ಕಾರ ರೈತರಿಂದ ನೇರವಾಗಿ ತೊಗರಿ ಖರೀದಿಸಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮಾ ಮಾಡುವಂತೆ ರೈತರು ಜಿಲ್ಲಾಧಿಕಾರಿಗಳಿಗೆ ರೈತರು ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಹಾಗೂ ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ ಖುದ್ದಾಗಿ ರೈತರ ಜಮೀನುಗಳಿಗೆ ತೆರಳಿಗೆ ತೊಗರಿ ಬೆಳೆ ವೀಕ್ಷಣೆ ಮಾಡಿದ್ದಾರೆ.Conclusion:ವಿಜಯಪುರ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.