ವಿಜಯಪುರ: ಮುಳವಾಡ ಮತ್ತು ಚಿಮ್ಮಲಗಿ ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ, ಅಖಂಡ ಕರ್ನಾಟಕ ರೈತ ಸಂಘಟನೆ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಕೂಡಗಿಯಲ್ಲಿ ಧರಣಿ ನಡೆಸುತ್ತಿರೋ ರೈತರು , ಬೇಸಿಗೆ ಆರಂಭವಾಗಿದ್ದು ಕೃಷಿ ಚಟುವಟಿಕೆ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಅನೇಕ ಸಾರಿ ಕಾಲುವೆಗಳಿಗೆ ನೀರು ಹರಿಸುವಂತೆ, ಸಂಭವಿಸಿದ ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಕ್ಯಾರೆ ಎನ್ನುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಕೂಡಗಿ ಬಳಿ ರೈಲ್ವೆ ಪುಸ್ಸಿಂಗ್ ಕಾಮಗಾರಿ ನೆಪದಲ್ಲಿ ನೀರು ಹರಿಸಲಾಗುತ್ತಿಲ್ಲ ಎಂದು ನೆಪ ಹೇಳಿಕೊಂಡು ಬರುತ್ತಿದ್ದಾರೆ. ನೀರಿಲ್ಲದೇ ಜಿಲ್ಲೆಯಲ್ಲಿ ರೈತರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ರೈಲು ಪುಸ್ಸಿಂಗ್ ಕಾಮಗಾರಿ ನಿಲ್ಲಿಸಿಯಾದ್ರೂ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಇಲ್ಲವಾದ್ರೆ ನಿರಂತರವಾಗಿ ರೈತರ ಅಹೋರಾತ್ರಿ ಧರಣಿ ಮುಂದುವರೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.