ETV Bharat / state

ವಿಜಯಪುರ: ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ; ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು - ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ಅಪಘಾತ

ಕೆಟ್ಟು ನಿಂತಿದ್ದ ಲಾರಿಯ ಚಾಲಕ ದುರಸ್ತಿಯಲ್ಲಿ ನಿರತನಾಗಿದ್ದ. ಇದೇ ಸಂದರ್ಭದಲ್ಲಿ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಸೇರಿ ಒಟ್ಟು ನಾಲ್ವರು ಅಸುನೀಗಿದ್ದಾರೆ.

four dead in road accident in vijayapura
ವಿಜಯಪುರ: ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ... ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು
author img

By

Published : Oct 20, 2021, 10:59 AM IST

Updated : Oct 20, 2021, 2:07 PM IST

ವಿಜಯಪುರ: ಕೆಟ್ಟು ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ.

ಕಾರಿನಲ್ಲಿದ್ದ ವಿಜಯಪುರ ನಗರದ ಸಾಯಿ ಪಾರ್ಕ್ ಬಡಾವಣೆ ನಿವಾಸಿ ಪಿಡಿಜೆ ಶಾಲೆಯ ಶಿಕ್ಷಕರಾಗಿದ್ದ ಮಂಜುನಾಥ ಮುಂಡೆವಾಡಿ (42) ಪತ್ನಿ ಸಾವಿತ್ರಿ (37) ಹಾಗೂ ಮಗು ಆರಾಧ್ಯ (8) ಸಾವನ್ನಪ್ಪಿದ್ದಾರೆ.

ವಿಜಯಪುರ: ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ; ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಗೋವಾ ಪ್ರವಾಸ ಮುಗಿಸಿಕೊಂಡು ಕಾರಿನಲ್ಲಿ ವಿಜಯಪುರಕ್ಕೆ ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಲಾರಿ ಚಾಲಕನ ಹೆಸರು ತಿಳಿದುಬಂದಿಲ್ಲ. ಚಾಲಕನು ಕೆಟ್ಟು ನಿಂತಿದ್ದ ಲಾರಿಯ ದುರಸ್ತಿಯಲ್ಲಿ ನಿರತನಾಗಿದ್ದ ಸಂದರ್ಭದಲ್ಲೇ ಅವಘಡ ನಡೆದಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Weather Report: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮುಂದುವರೆಯಲಿದೆ ವರ್ಷಧಾರೆ

Last Updated : Oct 20, 2021, 2:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.