ವಿಜಯಪುರ : ಸರ್ಕಾರಿ ಬಸ್ ಹಾಗೂ ಫಾರ್ಚ್ಯೂನರ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಧಾರುಣ ಘಟನೆ ವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ-52 ರಲ್ಲಿ ನಡೆದಿದೆ.
ಮೃತರೆಲ್ಲರೂ ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯ ನಾಂದೇಡ ಮೂಲದವರಾಗಿದ್ದು, ಕಾರಿನ ಚಾಲಕನ ಅತೀ ವೇಗದ ಚಾಲನೆ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
![Four people died by road accident](https://etvbharatimages.akamaized.net/etvbharat/prod-images/13762366_tssshu.jpg)
ನಿಶ್ಚಿತಾರ್ಥ ಕಾರ್ಯವನ್ನು ಮುಗಿಸಿಕೊಂಡು ನರಗುಂದದಿಂದ ಬಸ್ ವಿಜಯಪುರಕ್ಕೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಜಯಪುರ ಗ್ರಾಮೀಣ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಹೆಸರು ಹಾಗೂ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಈ ಸಂಬಂಧ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು 315 ಮಂದಿಯಲ್ಲಿ ಕೊರೊನಾ ದೃಢ.. ಇಬ್ಬರು ಸೋಂಕಿಗೆ ಬಲಿ..