ETV Bharat / state

ವಿಜಯಪುರಲ್ಲಿ ಕೊರೊನಾ ಆರ್ಭಟ:  ನಾಲ್ಕು ವರ್ಷದ ಬಾಲಕಿಯಲ್ಲಿ ಸೋಂಕು ದೃಢ - Corona firm for the girl

ವಿಜಯಪುರದಲ್ಲಿ ನಾಲ್ಕು ವರ್ಷದ ಬಾಲಕಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಜನತೆಯಲ್ಲಿ ಭೀತಿಗೆ ಕಾರಣವಾಗಿದೆ. ರೋಗಿ ಸಂಖ್ಯೆ 594ರಿಂದ ಸೋಂಕು ಹರಡಿದೆ ಎಂಬುದಾಗಿ ತಿಳಿದುಬಂದಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

Four-year-old girl reported corona positive in Vijayapur
ವಿಜಯಪುರಲ್ಲಿ ಕೊರೊನಾ ಆರ್ಭಟ: ನಾಲ್ಕು ವರ್ಷದ ಬಾಲಕಿಯಲ್ಲಿ ಸೋಂಕು ದೃಢ
author img

By

Published : May 16, 2020, 11:09 PM IST

ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆರ್ಭಟ ಮುಂದುವರಿದಿದೆ. ಇದೀಗ ನಾಲ್ಕು ವರ್ಷದ ಬಾಲಕಿಯಲ್ಲಿ ಕೊರೊನಾ ದೃಢ ಪಟ್ಟಿದ್ದು, ಆತಂಕ ಮನೆ ಮಾಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ನಾಲ್ಕು ವರ್ಷದ ಬಾಲಕಿ ರೋಗಿ ನಂಬರ್ 1,091 ಎಂದು ಗುರುತಿಸಲಾಗಿದೆ. ರೋಗಿ ನಂಬರ್ 594ರ ಸಂಪರ್ಕದಿಂದ ಸೋಂಕು ತಗುಲಿದೆ.

ಜಿಲ್ಲಾಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈವರೆಗೆ 37 ಜನರು‌ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮೂವರು ಕೊರೊನಾಕ್ಕೆ ಬಲಿಯಾಗಿದ್ದರೆ, ಬಾಲಕಿ ಸೇರಿದಂತೆ 13 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.