ವಿಜಯಪುರ: ಬಿಎಲ್‍ಡಿಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ 114ನೇ ಜನ್ಮದಿನದ ಅಂಗವಾಗಿ ವಿಜಯಪುರದ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಮುಲ್ಕ್ ಮೈದಾನದ ಥೋಪ್ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಉಪ ಕುಲಪತಿ ಡಾ. ಎಂ.ಎಸ್.ಬಿರಾದಾರ, ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪಾಲಿಸಲು ವಿದ್ಯಾರ್ಥಿಗಳು ಕನಿಷ್ಠ ಕ್ರಮಗಳನ್ನಾದರೂ ಕೈಗೊಳ್ಳಬೇಕು ಹಾಗೂ ನಮ್ಮ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಎಲ್ಲರೂ ಮುಂದಾಗಬೇಕು ಎಂಬ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ವಿಜಯಕುಮಾರ್ ಕಲ್ಯಾಣಪ್ಪಗೋಳ, ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.