ವಿಜಯಪುರ: ತಾಯಿ ಬೈದಿದ್ದಕ್ಕೆ ಮನನೊಂದು ಬಾಲಕಿಯೊಬ್ಬಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಾಂಧಿ ನಗರದಲ್ಲಿ ನಡೆದಿದೆ.
ಸ್ನೇಹಾ ನಂದಿ (17) ಮೃತ ಬಾಲಕಿ. ನಿನ್ನೆ ರಾತ್ರಿ ತಾಯಿ ಲಕ್ಷ್ಮಿ ಜತೆ ಸ್ನೇಹಾ ಜಗಳವಾಡಿದ್ದಾಳೆ. ಈ ವೇಳೆ ತಾಯಿ ಲಕ್ಷ್ಮಿ ಸ್ನೇಹಾಗೆ ಬೈದಿದ್ದಾಳೆ. ಇದರಿಂದ ಮನನೊಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಆಗಮಿಸಿ ಶವವನ್ನು ಹೊರ ತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.