ವಿಜಯಪುರ: ಹನುಮ ಜಯಂತಿ ಹಿನ್ನೆಲೆ ಜಿಲ್ಲೆಯ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದ ಗೊಲ್ಲಾಳೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ನಾನಾ ಭಾಗದಿಂದ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವಕ್ಕೆ ಸಾಕ್ಷಿಯಾದರು.
ಶನಿವಾರ ಸಂಜೆ ಗೊಲ್ಲಾಳೇಶ್ವರನ ಮಹಾರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆ ಗೊಲ್ಲಾಳೇಶ್ವರ ಜಾತ್ರೆಯನ್ನು ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಕೊರೊನಾ ನಿಯಂತ್ರಣ ಹಿನ್ನೆಲೆ ಜಾತ್ರಾ ಮಹೋತ್ಸವವನ್ನು ಅದ್ಧೂರಿಯಾಗಿ ನೇರವೇರಿಸಲಾಯಿತು. ಲಕ್ಷಾಂತರ ಭಕ್ತ ಸಮೂಹದ ಮಧ್ಶೆ ವಿಜೃಂಭಣೆಯಿಂದ ಮಹಾರಥೋತ್ಸವ ಜರುಗಿತು. ದೇವರಿಗೆ ಉತ್ಪತ್ತಿ, ಬಾಳೆ ಹಣ್ಣು ಎರಚಿ ತಮ್ಮ ಭಕ್ತರು ತಮ್ಮ ಭಕ್ತಿ ಮೆರೆದರು.
ಇದನ್ನೂಓದಿ: ಹನುಮ ಜಯಂತಿಯಂದೇ ಮೂರ್ತಿಯ ಕಣ್ಣಿನಿಂದ ಬರುತ್ತಿದೆಯಂತೆ ನೀರು..