ವಿಜಯಪುರ: ಕೊರೊನಾ ನಡುವೆ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬ ಸಾಮಾಜಿಕ ಅಂತರ ಮರೆತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸರ್ಕಾರಿ ನಿಯಮ ಗಾಳಿಗೆ ತೂರಿರುವ ಘಟನೆ, ಜಿಲ್ಲೆಯ ಇಂಡಿ ತಾಲೂಕಿನ ಹಡಲಸಂಗ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರವಿಂದ ಪೂಜಾರಿ ಹುಟ್ಟುಹಬ್ಬ ಆಚರಿಸಿ ಕೊಂಡವರು. ಸೋನಕನಹಳ್ಳಿ ಪಿಕೆಪಿಎಸ್ ಕಚೇರಿಯಲ್ಲಿ ಭರ್ಜರಿಯಾಗಿ ಹುಟ್ಟುಹಬ್ಬ ಆಚರಿಸಿ ಕೊಂಡಿದ್ದಾರೆ. ಕೊರೊನಾ ನಡುವೆ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದಂತೆ ಜನರನ್ನು ಗುಂಪು ಸೇರಿಸಿ ಆಚರಣೆ ಮಾಡಿಕೊಂಡಿದ್ದಾರೆ.
ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಅದನ್ನು ಲೆಕ್ಕಿಸದೇ ಜನರನ್ನು ಗುಂಪು ಸೇರಿಸಿಕೊಂಡು ಜನ್ಮದಿನಾಚರಣೆ ಆಚರಿಸಿಕೊಂಡು ತಾಲೂಕು ಆಡಳಿತದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.