ETV Bharat / state

ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - Protest in Vijayapur

ರಾಯಣ್ಣ ಪುತ್ಥಳಿ ತೆರವುಗೊಳಿಸಿರುವುದನ್ನು ವಿರೋಧಿಸಿ ಹಾಲು ಮತ ಮಹಾಸಭಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Protest in Vijayapur
ಹಾಲು ಮತ ಮಹಾಸಭಾ ಕಾರ್ಯಕರ್ತರಿಂದ ಪ್ರತಿಭಟನೆ
author img

By

Published : Aug 20, 2020, 2:41 PM IST

ವಿಜಯಪುರ: ಬೆಳಗಾವಿ ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ತೆರವುಮಾಡಲಾಗಿದೆ ಎಂದು ಆರೋಪಿಸಿ ಹಾಲು ಮತ ಮಹಾಸಭಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಾಲು ಮತ ಮಹಾಸಭಾ ಕಾರ್ಯಕರ್ತರಿಂದ ಪ್ರತಿಭಟನೆ

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಬೆಳಗಾವಿ ಜಿಲ್ಲಾಡಳಿತ ವಿರೋಧಿಸುವುದು ಸರಿಯಲ್ಲ‌. ರಾಯಣ್ಣ ತವರು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರನಿಗೆ ಅನ್ಯಾಯ ಮಾಡಿ ಜನ ಪ್ರತಿನಿಧಿಗಳು ಮರಾಠಿ ಭಾಷಿಕರ ಮತಗಳಿಕೆಗಾಗಿ ಹುನ್ನಾರ ಮಾಡುತ್ತಿದ್ದಾರೆ. ಅಲ್ಲದೆ ಜಿಲ್ಲಾಡಳಿತವೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆಸರಿನಲ್ಲಿ ಮೂರ್ತಿ ಸ್ಥಾಪನೆ ಅಡ್ಡಿಪಡಿಸುವ ನಡೆಗೆ ರಾಜ್ಯದಲ್ಲಿ ಅನೇಕ ಜನರು ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಬೆಳಗಾವಿ ಜಿಲ್ಲಾಡಳಿತ ವಿರುದ್ಧ ಕಿಡಿ ಕಾರಿದರು.

ಇನ್ನು ಜಿಲ್ಲೆಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡುವಂತೆ ಒತ್ತಾಯಿಸಿ ಹಾಲುಮತ ಮಾಹಾಸಭಾದ ಕಾರ್ಯಕರ್ತರು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.