ವಿಜಯಪುರ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ರಾತ್ರಿಯಿಡೀ ಸುರಿದ ಮಳೆಗೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಹಲವು ಗ್ರಾಮಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ.
ಬಬಲೇಶ್ವರ ತಾಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆಯಿಂದಲೇ ಭಾರೀ ಮಳೆಯಾಗಿದೆ. ಚರಂಡಿ ನೀರು ರಸ್ತೆಯಲ್ಲಿ ನಿಂತ ಪರಿಣಾಮ ಗ್ರಾಮಸ್ಥರು ಪರದಾಡುವಂತಾಗಿದೆ. ಅಷ್ಟೇ ಅಲ್ಲದೆ ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ಮನೆಯಲ್ಲಿದ್ದ ದವಸ-ಧಾನ್ಯಗಳು ಸಂಪೂರ್ಣ ನೀರುಪಾಲಾಗಿವೆ.
ಬಳಿಕ ಜೆಸಿಬಿ ಯಂತ್ರದ ಮೂಲಕ ಗುಂಡಿ ತೋಡಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಲಾಯಿತು.