ವಿಜಯಪುರ: ಚಲಿಸುತ್ತಿದ್ದ ಕಾರಿಗೆ ಕುದುರೆ ಅಡ್ಡ ಬಂದ ಪರಿಣಾಮ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಕೃಷಿ ಆಧಿಕಾರಿ ಎನ್ಟಿ ಗೌಡರ ಅವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ನಿಡಗುಂದಿ ತಾಲೂಕು ಕೃಷಿ ಆಧಿಕಾರಿ ಗೌಡರ್ ಅವರು ಕಚೇರಿಗೆ ಹೋಗುವಾಗ ಕುದುರೆ ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುತ್ತಿದ್ದಂತೆ ಹಿಂಬದಿ ಇದ್ದ ಕೆಎಸ್ಆರ್ಟಿಸಿ ಬಸ್ ಕಾರಿಗೆ ಗುದ್ದಿದೆ. ಬಸ್ ಗುದ್ದಿದ ಪರಿಣಾಮ ಕಾರು ಪಲ್ಟಿಯಾಗಿದೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದರ ಮಧ್ಯೆ ತೀವ್ರ ಗಾಯಗೊಂಡಿದ್ದ ಕುದುರೆ ಸ್ಥಳದಲ್ಲಿ ಸಾವನ್ನಪ್ಪಿದೆ. ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ : ಬೆಂಗಳೂರಲ್ಲಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ.. ಸ್ಕೂಟರ್ಗೆ ಬಸ್ ಡಿಕ್ಕಿ- ತಾಯಿ ಮಗಳಿಗೆ ಗಾಯ