ವಿಜಯಪುರ : ಟೋಲ್ ಪ್ಲಾಜಾ ಸಿಬ್ಬಂದಿ ವಾಹನ ಸವಾರರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರಾಷ್ಟ್ರೀಯ ಬಸವ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ ಹೊರ ಹೊಲಯದಲ್ಲಿರುವ ಟೋಲ್ ಸಿಬ್ಬಂದಿ ವಾಹನ ಸವಾರರೊಂದಿಗೆ ಸರಿಯಾಗಿ ನಡೆದುಕೊಳ್ಳುತ್ತಿಲ್ಲ. ಇತ್ತ ದೂರದ ಊರುಗಳಿಂದ ಬರುವ ಜನರೊಂದಿಗೆ ಅನುಚಿತವಾಗಿ ವರ್ತನೆ ಮಾಡುತ್ತಿದ್ದಾರೆ. ಹಳ್ಳಿಗಳಿಂದ ಪ್ರತಿದಿನ ಸಾವಿರಾರು ರೈತರು ರಾಷ್ಟ್ರೀಯ ಹೆದ್ದಾರಿ ಮೂಲಕ ಗುಮ್ಮಟನಗರಿಯ ಎಪಿಎಂಸಿ ಮಾರುಕಟ್ಟೆಗೆ ಆಗಮಿಸುತ್ತಾರೆ. ರೈತರೊಂದಿಗೆ ಪ್ಲಾಜಾ ಸಿಬ್ಬಂದಿ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಬಸವ ಸೈನ್ಯದ ಕಾರ್ಯಕರ್ತರು ಆರೋಪಿಸಿದ್ರು.
ಜನರೊಂದಿಗೆ ಸರಿಯಾಗಿ ನಡೆದುಕೊಳ್ಳದ ಟೋಲ್ ಪ್ಲಾಜಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ರಾಷ್ಟ್ರೀಯ ಬಸವ ಸೈನ್ಯದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.