ವಿಜಯಪುರ: ಜಿಲ್ಲೆಯಿಂದ ಮಹಾರಾಷ್ಟ ಹೊರತುಪಡಿಸಿ ತಮ್ಮ ಸ್ವಂತ ರಾಜ್ಯಕ್ಕೆ ತೆರಳಬೇಕಾದ ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ವಿವರವನ್ನು ಸೇವಾಸಿಂಧು ವೆಬ್‌ಸೈಟ್‌ನಲ್ಲಿ ನಮೂದಿಸಬಹುದು. ಅದರಂತೆ ಈ ಕೆಳಗಿನ ಬಸ್ ನಿಲ್ದಾಣ ಹಾಗೂ ಕಚೇರಿಗಳಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿ ನೀಡಿ ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.
ಉಪ ವಿಭಾಗಾಧಿಕಾರಿಗಳ ಕಚೇರಿ, ವಿಜಯಪುರ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರ ಬಸ್ ನಿಲ್ದಾಣ, ತಹಶೀಲ್ದಾರ್ ಕಚೇರಿ, ಕಾರ್ಮಿಕ ಅಧಿಕಾರಿಗಳ ಕಚೇರಿ, ರೈಲ್ವೆ ನಿಲ್ದಾಣ, ಕಾರ್ಯ ನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಚೇರಿ, ಗ್ರಾಮ ಪಂಚಾಯಿತಿ ಕಚೇರಿ, ಹೋಬಳಿಯಲ್ಲಿರುವ ಅಟಲ್ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅದೇ ರೀತಿ ಹೆಚ್ಚಿನ ಮಾಹಿತಿಗಾಗಿ ಮೊ ಸಂಖ್ಯೆ: 8123457544, 988629565 ಹಾಗೂ ಟೋಲ್ ಫ್ರೀ ನಂ: 1077 ಗೆ ಸಹ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.
ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಈ ಸಹಾಯವಾಣಿ ಕೇಂದ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಅಲ್ಲದೇ ಗುಂಪು ಗುಂಪಾಗಿ ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಅದೇ ರೀತಿ ವಲಸೆ ಕಾರ್ಮಿಕರು, ಯಾತ್ರಿಕರು, ಪ್ರವಾಸಿಗರು ಹೊರತುಪಡಿಸಿ ಸುಳ್ಳು ಮಾಹಿತಿ ನೀಡಿ, ಹೋಗಲು ಪ್ರಯತ್ನಿಸಿದ್ದಲ್ಲಿ ಕಾನೂನಿನ ಪ್ರಕಾರ ಶಿಕ್ಷೆಗೆ ಅರ್ಹರಾಗುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.