ವಿಜಯಪುರ: ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಹೆಚ್ಚಿನ ಬೆಡ್ ವ್ಯವಸ್ಥೆ ಹಾಗೂ ಎಲ್ಲ ಮೆಡಿಕಲ್ ಶಾಪ್‌ಗಳಲ್ಲಿ ಒಂದೇ ದರ ನಿಗದಿಪಡಿಸುವಂತೆ ಪ್ರಗತಿ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಇನ್ನೂ ಕೆಲವು ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪರದಾಟ ನಡೆಸುವಂತಹ ಪ್ರಸಂಗಳು ಬೆಳಕಿಗೆ ಬರುತ್ತಿವೆ. ಜಿಲ್ಲಾಡಳಿತ ಸುಸಜ್ಜಿತವಾದ ಹೆಚ್ಚಿನ ಬೆಡ್‌ಗಳ ವ್ಯವಸ್ಥೆ ಮಾಡಬೇಕು. ಜಿಲ್ಲೆಯ ಅನೇಕ ಮೆಡಿಕಲ್ ಶಾಪ್‌ಗಳಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಯಲ್ಲಿ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದರು.
ಮೊದಲೇ ಕೊರೊನಾ ವೈರಸ್ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಇತರೆ ಕಾಯಿಲೆಗಳಿಗೆ ಔಷಧಿ ಖರೀದಿ ಮಾಡಲಾಗದೆ ತೊಂದರೆ ಅನುಭವಿಸುವಂತಾಗಿದೆ. ಇತ್ತ ಮಡಿಕಲ್ ಶಾಪ್ ಮಾಲಿಕರು ಮನಬಂದಂತೆ ಬೆಲೆ ನಿಗದಿ ಮಾಡುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಯವರಿಗೆ ಮನವರಿಕೆ ಮಾಡಿದರು.
ಜಿಲ್ಲಾಡಳಿತ ಕೊರೊನಾ ಸೋಂಕಿತರಿಗೆ ಹೆಚ್ಚಿನ ಬೆಡ್ ವ್ಯವಸ್ಥೆ ಮಾಡುವುದರ ಜೊತೆಗೆ ಔಷಧಿಗಳಿಗೆ ಅಧಿಕ ಬೆಲೆ ಪಡೆಯುತ್ತಿರುವ ಮೆಡಿಕಲ್ ಶಾಪ್ ಮಾಲೀಕರ ವಿರುದ್ಧ ಕ್ರಮಕ್ಕೆ ಮುಂದಾಗುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.