ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿಯಲ್ಲಿ ಬಸವಣ್ಣನ ಮೂರ್ತಿಗೆ ದುಷ್ಕರ್ಮಿಗಳು ಅವಮಾನ ಮಾಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಶನಿವಾರ ಬೆಳಗಿನ ಪೂಜಾ ವಿಧಿ - ವಿಧಾನದ ಬಳಿಕ ದೇವಸ್ಥಾನದಲ್ಲಿ ಯಾರೂ ಇಲ್ಲದ ಸಮಯದಲ್ಲಿ ದುಷ್ಕರ್ಮಿಗಳು ಈ ಕೃತ್ಯ ನಡೆಸಿದ್ದಾರೆ. ಕೂಡಗಿ ಎನ್ಟಿಪಿಸಿ ಪೊಲೀಸ್ ಠಾಣೆ ಪಿಎಸ್ಐ ಬಸವರಾಜ್ ಅವಟಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳ ಆಗಮಿಸಿದ್ದು, ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.
ತನಿಖೆಗೆ ಆಗ್ರಹ...
ಇನ್ನು ಗೊಳಸಂಗಿ ಬಸವಣ್ಣ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕು ಎಂದು ಬಸವ ಭಕ್ತರು ಆಗ್ರಹಿಸಿದ್ದಾರೆ. ಸ್ಥಳದಲ್ಲೇ ಪ್ರತಿಭಟನೆಯನ್ನೂ ನಡೆಸಿದ್ದಾರೆ. ಬಸವನಬಾಗೇವಾಡಿ ಡಿವೈಎಸ್ಪಿ, ಸಿಪಿಐ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದ ಎದುರು ಬಸವ ಭಕ್ತರ ಬಳಗ ಬೀಡು ಬಿಟ್ಟಿದೆ.