ETV Bharat / state

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಬೇಕಾದ ಪೂರಕ ವಾತಾವರಣವಿದೆಯೇ? - ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ

ಮಾನವನ ದೇಹ ಮತ್ತು ಮನಸ್ಸು ಸಂಪೂರ್ಣ ಸಮತೋಲನ ಸ್ಥಿತಿಯಲ್ಲಿದ್ದರೆ ಮಾತ್ರ ಆತ ಆರೋಗ್ಯಕರವಾಗಿದ್ದಾನೆಂದು ಅರ್ಥ. ಮನುಷ್ಯ ಆಧುನಿಕತೆಯತ್ತ ಸಾಗಿದಂತೆ ಅನಾರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತಿದ್ದು, ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ರೋಗಿಗಳ ಪ್ರತಿ ಸಮಸ್ಯೆಗೆ ಸಂಬಂಧಿಸಿದ ಚಿಕಿತ್ಸೆ ಪ್ರತಿ ಸಾರ್ವಜನಿಕ ಆಸ್ಪತ್ರೆಗಳಲ್ಲೂ ದೊರೆಯಬೇಕು. ಅದಕ್ಕೆ ಬೇಕಾದ ಸೂಕ್ತ ವ್ಯವಸ್ಥೆ ಅಂದರೆ ವೈದ್ಯಕೀಯ ಸಲಕರೆಣೆಯಿಂದ ಹಿಡಿದು ಸೂಕ್ತ ಸಿಬ್ಬಂದಿ ಆಸ್ಪತ್ರೆಯಲ್ಲಿರಬೇಕು. ಆಗ ಮಾತ್ರ ಉತ್ತಮ ವೈದ್ಯಕೀಯ ಸೇವೆ ನೀಡಲು ಸಾಧ್ಯ. ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

Is there all facilities for surgery in government hospitals?
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಬೇಕಾದ ಪೂರಕ ವಾತಾವರಣವಿದೆಯೇ?
author img

By

Published : Apr 2, 2021, 11:42 AM IST

Updated : Apr 2, 2021, 12:31 PM IST

ಬೆಂಗಳೂರು/ದಾವಣಗೆರೆ/ವಿಜಯಪುರ: ಆರೋಗ್ಯಕ್ಕಿಂತ ಮಿಗಿಲಾದದ್ದು ಮತ್ತೊಂದಿಲ್ಲ. ಮನುಷ್ಯ ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯಕರವಾಗಿದ್ದರೆ ಮಾತ್ರ ಆತ ಏನನ್ನಾದರೂ ಸಾಧಿಸಬಹುದು, ನೆಮ್ಮದಿಯುತ ಜೀವನ ಮಾಡಬಹುದು. ಆದ್ರೆ ಆಧುನಿಕತೆಯತ್ತ ಸಾಗಿದಂತೆ ಅನಾರೋಗ್ಯ ಸಮಸ್ಯೆಗಳು ಮನುಷ್ಯನನ್ನು ಹೆಚ್ಚಾಗಿ ಕಾಡುತ್ತಿವೆ. ಹೆಚ್ಚಿನ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಮೊರೆ ಹೋಗುತ್ತಿದ್ದಾರೆ. ಹಾಗಾಗಿ ಸರ್ಕಾರಿ ಆಸ್ಪತ್ರೆಗಳು ವೈದ್ಯಕೀಯ ಸಲಕರಣೆಗಳು, ಶಸ್ತ್ರಚಿಕಿತ್ಸೆಗೆ ಬೇಕಾದ ಸೂಕ್ತ ವ್ಯವಸ್ಥೆ ಹೊಂದಿರಬೇಕು.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಬೇಕಾದ ಪೂರಕ ವಾತಾವರಣವಿದೆಯೇ

ರಾಜ್ಯ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಬೇಕಾದ ಸೂಕ್ತ ವ್ಯವಸ್ಥೆಯಿದೆ. ಆದ್ರೆ ಕೊರೊನಾ ಹರಡುವಿಕೆ ಕಾರಣ ಕೆಲ ತಿಂಗಳುಗಳ ಕಾಲ ಶಸ್ತ್ರಚಿಕಿತ್ಸೆ ಮಾಡುತ್ತಿರಲಿಲ್ಲ. ಆದ್ರೀಗ ಸಿಬ್ಬಂದಿ ಕೊರತೆಯಿದ್ದರೂ ಯಾವುದೇ ಶಸ್ತ್ರಚಿಕಿತ್ಸೆ ಮುಂದೂಡುತ್ತಿಲ್ಲ.

ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಕಾರಣ ನಿಲ್ಲಿಸಿದ್ದ ಶಸ್ತ್ರ ಚಿಕಿತ್ಸೆಯನ್ನು ಕಳೆದ ಕೆಲ ದಿನಗಳಿಂದ ಮತ್ತೆ ಆರಂಭಿಸಲಾಗಿದೆ. ಆದ್ರೆ ಶಸ್ತ್ರ ಚಿಕಿತ್ಸೆಗೆ​ ಬೇಕಾದ ಸೂಕ್ತ ವ್ಯವಸ್ಥೆಯಿದ್ದರೂ ಖಾಸಗಿ ಆಸ್ಪತ್ರೆಗಳಿಗೆ ಕಳುಹಿಸುವ ಪದ್ಧತಿ ಮಾತ್ರ ತಪ್ಪಿಲ್ಲ ಎನ್ನುವ ಗಂಭೀರ ಆರೋಪವಿದೆ.

ಇದನ್ನೂ ಓದಿ: ಚಾಲಕರ ಕೊರತೆ, ಇಂಧನ ದರ ಹೆಚ್ಚಳ ಎಫೆಕ್ಟ್: ಸಂಕಷ್ಟದಲ್ಲಿದೆ ಗೂಡ್ಸ್ ಟ್ರಾನ್ಸ್​​​ಪೋರ್ಟ್ ಉದ್ಯಮ

ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಸೌಲಭ್ಯಗಳಿರುವುದಿಲ್ಲ ಅನ್ನೋರಿಗೆ ವಿಜಯಪುರ ಜಿಲ್ಲಾಸ್ಪತ್ರೆ ಉತ್ತಮ ಚಿಕಿತ್ಸೆ ಕೊಡುವುದರ ಮೂಲಕ ಮಾದರಿಯಾಗಿದೆ. ಕೊಂಚ ಮಟ್ಟಿನ ಸಿಬ್ಬಂದಿ ಕೊರತೆ ಹೊರತುಪಡಿಸಿದರೆ ಚಿಕಿತ್ಸೆಗೆ ಪೂರಕ ವಾತಾವರಣ ಇಲ್ಲಿದೆ. ಕೋವಿಡ್​​ ಆರಂಭದ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರು ಸೇರಿ ಹಲವಾರು ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗೆ ಹಿಂದೇಟು ಹಾಕಿದ್ದಾಗ, ಆ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಯಶಸ್ವಿ ಚಿಕಿತ್ಸೆ ನೀಡಲಾಗಿದೆ.

ಒಟ್ಟಿನಲ್ಲಿ ಹೆಚ್ಚಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಬೇಕಾದ ಸೂಕ್ತ ವೈದ್ಯಕೀಯ ವ್ಯವಸ್ಥೆಯಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ಆರೋಗ್ಯ ಸೇವೆ ನೀಡಲು ಹಿಂದೇಟು ಹಾಕುವ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಬಿಸಿ ಮುಟ್ಟಿಸಬೇಕಿದೆ. ಸರ್ಕಾರ ಕೂಡ ಸೂಕ್ತ ಸಿಬ್ಬಂದಿಯನ್ನು ನೇಮಿಸುವ ಮೂಲಕ ಆಸ್ಪತ್ರೆಯ ಕಾರ್ಯವೈಖರಿಯನ್ನು ಮತ್ತಷ್ಟು ಚುರುಕುಗೊಳಿಸಬೇಕಿದೆ.

Last Updated : Apr 2, 2021, 12:31 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.