ETV Bharat / state

ರಾಜ್ಯದಲ್ಲಿ ಮಿಷನ್ 150 ತಲುಪುವ ವಿಶ್ವಾಸವಿದೆ: ಜೆ.ಪಿ.ನಡ್ಡಾ

author img

By

Published : Apr 17, 2022, 7:04 PM IST

Updated : Apr 17, 2022, 7:22 PM IST

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮಾತನಾಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ

ವಿಜಯನಗರ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಶಕ್ತಿಯೊಂದಿಗೆ ಕಣಕ್ಕಿಳಿಯಲಿದ್ದು 150 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಪಕ್ಷವು ಪ್ರತಿ ಗ್ರಾಮ, ದಲಿತರು, ಬಡವರು, ಮಹಿಳೆಯರು, ಶೋಷಿತರ ಬದುಕಿನಲ್ಲಿ ಪರಿವರ್ತನೆ ತರುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಪಕ್ಷದ ಕಾರ್ಯಕಾರಿಣಿ ಸಭೆಯ ಅಜೆಂಡಾ ತೃಪ್ತಿ‌ ತಂದಿದೆ. ನಮ್ಮ ಕಾರ್ಯಕರ್ತರಿಗೆ ಕಾರ್ಯಕಾರಿಣಿ ಹುಮ್ಮಸ್ಸು ತುಂಬಿದೆ. ನಮ್ಮ ಮುಂದಿನ ಹಾದಿಯನ್ನು ಈಗಲೇ ನಾನು ಕಲ್ಪನೆ ಮಾಡಿಕೊಳ್ಳುತ್ತಿದ್ದೇನೆ. ಚುನಾವಣೆಯ ದೃಷ್ಟಿಯಿಂದ ಸರ್ಕಾರದ ಸಾಧನೆಗಳನ್ನು ಜನತೆಗೆ ತಲುಪಿಸುವ ಕೆಲಸವಾಗಬೇಕು ಎಂದರು.

ಬೆಂಗಳೂರಲ್ಲಿ ಮುಂದಿನ ಕಾರ್ಯಕಾರಿಣಿ: ಮುಂದಿನ ಬಿಜೆಪಿ ಕಾರ್ಯಕಾರಿಣಿ ಸಭೆಯು ಜುಲೈ ಅಂತ್ಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮಾರೋಪ ಸಮಾರಂಭದಲ್ಲಿ ಘೋಷಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರು ಸೇರಿದಂತೆ ಹಲವಾರು ನಾಯಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಈಶ್ವರಪ್ಪ ಆಸ್ತಿ ಲೆಕ್ಕ ಮಾಡಿ ಮುಟ್ಟುಗೋಲು ಹಾಕಿ : ಸಿ ಎಂ ಇಬ್ರಾಹಿಂ ಆಗ್ರಹ

Last Updated : Apr 17, 2022, 7:22 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.