ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಜೈನಾಪುರದ ನದಿ ದಡದಲ್ಲಿ ತೇಲಿ ಬಂದಿದ್ದ ಅಪರಿಚಿತ ಮಹಿಳೆಯ ಶವವೊಂದು ನದಿ ನೀರು ತರಲು ಹೋದ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಯಾರೋ ಮಹಿಳೆಯನ್ನು ಕೊಲೆ ಮಾಡಿ ನಂತರ ಶವ ತೇಲದಂತೆ ಕಲ್ಲು ಕಟ್ಟಿ ನದಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಸ್ಥಳಕ್ಕೆ ಬಬಲೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರೆಸಿದ್ದಾರೆ.