ವಿಜಯನಗರ: ಹೊಸಪೇಟೆಯ ಗಣಿ ಉದ್ಯಮಿ ಹಾಗು ಪುನೀತ್ ರಾಜ್‌ಕುಮಾರ್ ನಟನೆಯ 'ಜೇಮ್ಸ್' ಚಿತ್ರದ ನಿರ್ಮಾಪಕ ಕಿಶೋರ್ ಪತ್ತಿಕೊಂಡ (42) ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಮನೆಯಲ್ಲಿ ರಾತ್ರಿ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ಆಪ್ತ ಸ್ನೇಹಿತರೊಬ್ಬರು ತಿಳಿಸಿದರು.
ಇದನ್ನೂ ಓದಿ: ಥಿಯೇಟರ್ಗಳಿಗೆ ಬೈರಾಗಿ ಭೇಟಿ.. ಚಾಮರಾಜನಗರ ರಾಯಭಾರಿಯಾಗಲು ಸಿದ್ಧ ಎಂದ ಶಿವಣ್ಣ!!