ETV Bharat / state

ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿಜಯಪುರ ಪ್ರವಾಸ: ಸಿಂದಗಿಯಲ್ಲಿ ಸಾರ್ವಜನಿಕ ಸಭೆ - ಈಟಿವಿ ಭಾರತ ಕನ್ನಡ

ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆಗಮನ - ಸಿಂದಗಿಯಲ್ಲಿ ಸಾರ್ವಜನಿಕ ಸಭೆ - ಸಭೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ.

jp-nadda-visiting-vijayapur-tomorrow
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ
author img

By

Published : Jan 20, 2023, 3:36 PM IST

ಗೋಪಾಲ ಕಾರಜೋಳ ಹೇಳಿಕೆ

ವಿಜಯಪುರ: ನಾಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವಿಜಯಪುರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡ ಗೋಪಾಲ ಕಾರಜೋಳ ಹೇಳಿದರು.‌ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಾಳೆ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸಲಿದ್ದಾರೆ. ದೆಹಲಿಯಿಂದ‌ ವಿಶೇಷ ವಿಮಾನದ ಮೂಲಕ ಕಲಬುರಗಿ ಏರ್​ಪೋರ್ಟ್​ಗೆ ಆಗಮಿಸಲಿರುವ ನಡ್ಡಾ ಬೆಳಗ್ಗೆ 11-30 ಕ್ಕೆ ಹೆಲಿಕಾಪ್ಟರ್ ಮೂಲಕ ವಿಜಯಪುರ ನಗರದ ಸೈನಿಕ ಶಾಲೆಯ ಹೆಲಿಪ್ಯಾಡ್​ಗೆ ಆಗಮಿಸಲಿದ್ದಾರೆ ಎಂದರು.

11-40ಕ್ಕೆ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿ ಲಿಂಗೈಕ್ಯ ಶ್ರೀಗಳ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಲಿದ್ದಾರೆ. ನಂತರ ನಾಗಠಾಣ ಮತಕ್ಷೇತ್ರ ವ್ಯಾಪ್ತಿಯ ನಗರದ ವಾರ್ಡ್ ನಂಬರ್ 12ರ ಬಿಎಲ್​ಡಿಇ ಇಂಜಿನಿಯರ್ ಕಾಲೇಜ್ ಬಳಿಯ ಮೈದಾನದಲ್ಲಿ ಮನೆ ಮನೆ ಭೇಟಿ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಬಳಿಕ ವಾರ್ಡ್ ನಂಬರ್ 10ರಲ್ಲಿ ಗೋಡೆ ಬರಹ‌ ಹಾಗೂ ಫಲಾನುಭವಿಗಳ ಮನೆಗೆ ಭೇಟಿ‌ ನೀಡಲಿದ್ದು, ನಡ್ಡಾ ಸಾಂಕೇತಿಕವಾಗಿ ಐದು‌ ಜನ ಫಲಾನುಭವಿಗಳ ಮನೆಗೆ ಭೇಟಿ ನಂತರ 12-45 ಕ್ಕೆ ಹೆಲಿಕಾಪ್ಟರ್ ಮೂಲಕ ಸಿಂದಗಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ನಂತರ ಸಿಂದಗಿಯ ವಿಜಯಪುರ ರಸ್ತೆಯಲ್ಲಿ ಆಯೋಜನೆ ಮಾಡಿರುವ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ ಎಂದರು.

ಸಾರ್ವಜನಿಕ ಸಮಾವೇಶ: ಮಾಜಿ ಸಿಎಂ ಯಡಿಯೂರಪ್ಪ, ಸಚಿವ ಅಶ್ವತ್ಥ ನಾರಾಯಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ್​ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಲಿ ಹಾಗೂ‌ ಮಾಜಿ ಶಾಸಕರು, ಪದಾಧಿಕಾರಿಗಳು ‌ನಿಗಮ ಮಂಡಳಿ ಅಧ್ಯಕ್ಷರು ಸಾಥ್‌ ನೀಡಲಿದ್ದಾರೆ ಎಂದರು. ಸಾರ್ವಜನಿಕ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ವು ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ನಾಗಠಾಣ, ಇಂಡಿ, ದೇವರ ಹಿಪ್ಪರಗಿ ಹಾಗೂ ಸಿಂದಗಿ ನಾಲ್ಕು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಇದನ್ನೂ ಓದಿ: ಅಭಿವೃದ್ಧಿ ರಾಜಕಾರಣ ಎಂದರೆ ಏನೆಂದು ತೋರಿಸಿಕೊಟ್ಟವರು ಮೋದಿ: ಬಿಜೆಪಿ ಟ್ವೀಟ್

ನಾಗಠಾಣ ಕ್ಷೇತ್ರದ ಆಕಾಂಕ್ಷಿ: ನಾಗಠಾಣ ಮೀಸಲು ವಿಧಾನಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ವರಿಷ್ಠರು ಸ್ಪರ್ಧೆಗೆ ಅವಕಾಶ ನೀಡಿದರೆ ಸ್ಪರ್ಧಿಸುವುದಾಗಿ ಬಿಜೆಪಿ‌ ನಾಗಠಾಣ ಕ್ಷೇತ್ರ ಟಿಕೇಟ್ ಆಕಾಂಕ್ಷಿ ಗೋಪಾಲ ಕಾರಜೋಳ ಇಚ್ಚೆ ವ್ಯಕ್ತಪಡಿಸಿದರು. ಸಂಸದ ರಮೇಶ ಜಿಗಜಿಣಗಿ ನಾಗಠಾಣದಿಂದ ವಿಧಾನಸಭೆಗೆ ಸ್ಪರ್ಧಿಸುವ ಇಚ್ಚೆ ಹೊಂದಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ಸ್ಪರ್ಧಿಸುವುದಾದರೆ ತಾವು ಸಾಮಾನ್ಯ ಕಾರ್ಯಕರ್ತನಾಗಿ ಅವರ ಗೆಲುವಿಗೆ ಶ್ರಮಿಸುವೆ. ಆಕಸ್ಮಿಕವಾಗಿ ತಮಗೆ ಟಿಕೆಟ್​​ ನೀಡಿದರೆ ಸ್ಪರ್ಧಿಸುವೆ ಎಂದರು.

ಇದನ್ನೂ ಓದಿ: ಕಲಬುರಗಿ: ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಪ್ರಧಾನಿ ಮೋದಿ ಚಾಲನೆ

ಈಗಾಗಲೇ ಕ್ಷೇತ್ರದಲ್ಲಿ ಸಕ್ರಿಯವಾಗಿ ಸಂಚರಿಸಿ ಮತದಾರರನ್ನು ಭೇಟಿಯಾಗುತ್ತಿದ್ದೇನೆ. ಅವರ ಮನಗೆದ್ದು ನಾಗಠಾಣ ಕ್ಷೇತ್ರದಲ್ಲಿ ಕಮಲ ಅರಳಿಸುವುದಾಗಿ ಹೇಳಿದರು. ಕುಟುಂಬಕ್ಕೆ ಒಬ್ಬರಿಗೆ ಟಿಕೆಟ್ ನೀಡುವುದಾದರೆ ನಮ್ಮ ತಂದೆ ಗೋವಿಂದ ಕಾರಜೋಳ‌ ಮುಧೋಳ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ, ತಾನು ಕಾರ್ಯಕರ್ತನಾಗಿ ನಾಗಠಾಣ ಕ್ಷೇತ್ರಕ್ಕೆ ಯಾರಿಗೆ ಟಿಕೇಟ್ ನೀಡುತ್ತಾರೆ ಅವರ ಗೆಲುವಿಗೆ ಶ್ರಮಿಸುವುದಾಗಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕಲ್ಯಾಣ ಕರ್ನಾಟಕದಲ್ಲಿ ಮೋದಿ: ಐತಿಹಾಸಿಕ ಕ್ಷಣ‌ ಸೃಷ್ಟಿಸಿದ ಹಕ್ಕುಪತ್ರ ವಿತರಣೆ ಕಾರ್ಯಕ್ರಮ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.