ವಿಜಯಪುರ/ಬಾಗಲಕೋಟೆ: ಕನ್ನಡ ರಾಜ್ಯೋತ್ಸವ ಹಿನ್ನೆಲೆ ಎರಡೂ ಜಿಲ್ಲೆಯಲ್ಲೂ ಬಹಳ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ವಿಜಯಪುರದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ರಾಷ್ಟಧ್ವಜಾರೋಹಣ ನೇರವೇರಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಾಗಲಕೋಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಧ್ವಜಾರೋಹಣ ನೆರವೇರಿಸಿದರು.
ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಮಾತನಾಡಿ, ಸ್ವಾತಂತ್ರ್ಯ ನಂತರ ಕರ್ನಾಟಕ ಏಕೀಕರಣಕ್ಕೆ ಅನೇಕರು ಹೋರಾಟ ಮಾಡಿದ ಫಲವಾಗಿ ಹಂಚಿಹೋಗಿದ್ದ ಎಲ್ಲಾ ಪ್ರಾಂತ್ಯಗಳು ಒಟ್ಟಾಗಿ ಸೇರಿಕೊಂಡವು ಎಂದ ಅವರು, ಕನ್ನಡಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದರು.
ಸಚಿವರಾದ ಗೋವಿಂದ ಕಾರಜೋಳ ಮಾತನಾಡಿ, ನೆರೆಯಿಂದ ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಾಕಷ್ಟು ತೊಂದರೆ ಉಂಟಾಗಿತ್ತು. ಸಂತ್ರಸ್ತರಿಗೆ ಬೇಕಾಗುವ ಎಲ್ಲಾ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದ ಅವರು, ಕನ್ನಡ ನಾಡು - ನುಡಿ ಸಂರಕ್ಷಣೆ ಮಾಡುವುದಕ್ಕೆ ಎಲ್ಲರೂ ಬದ್ದರಾಗಬೇಕಾಗಿದೆ ಎಂದು ಕರೆ ನೀಡಿದರು.