ವಿಜಯಪುರ: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಬೆಂಗಳೂರು ಜಿಲ್ಲೆಯ ಪ್ರವಾಹ ಸಂತ್ರಸ್ತರಿಗೆ ಅಗತ್ಯ ವಸ್ತುಗಳ 20 ಸಾವಿರ ಕಿಟ್ ನೀಡಿದೆ.
ಕಳದ ವಾರ ಸುರಿದ ಭಾರಿ ಮಳೆಗೆ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಸಿಂದಗಿ, ಚಡಚಣ, ಇಂಡಿ ಭಾಗದ 40ಕ್ಕೂ ಹೆಚ್ಚು ಹಳ್ಳಿಗಳು ಜಲಾವೃತಗೊಂಡಿದ್ದವು. ಹೀಗಾಗಿ ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಸಾಬೂನು ಮತ್ತು ಮಾರ್ಜಕ ನಿಯಮಿತ ಬೆಂಗಳೂರು ಕೊಬ್ಬರಿ ಎಣ್ಣೆ, ಬಟ್ಟೆ ಸಾಬೂನು ಸೇರಿದಂತೆ ಅಗತ್ಯ ವಸ್ತುಗಳ ಕಿಟ್ ನೀಡಿದೆ. ಇನ್ನು, ಸರ್ಕಾರದಿಂದ ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಿಗೆ ತಲಾ 50 ಸಾವಿರ ಕಿಟ್‌ಗಳನ್ನು ಸಂತ್ರಸ್ತರಿಗೆ ತಲುಪಿಸಲಾಗುತ್ತಿದ್ದು, ಜಿಲ್ಲೆಗೆ ಬಂದ ಕಿಟ್ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಪಡೆದುಕೊಂಡರು.
ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಕಿಟ್‌ಗಳನ್ನು ಆಯಾ ತಾಲೂಕು ಆಡಳಿತದ ಮೂಲಕ ವಿತರಣೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.