ಮುದ್ದೇಬಿಹಾಳ(ವಿಜಯಪುರ): ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳನ್ನ ಎಸ್ಸಿ ಪಟ್ಟಿಯಿಂದ ಕೈ ಬಿಟ್ಟಿರುವುದಾಗಿ ಪರಿಶಿಷ್ಟ ಜಾತಿ ಆಯೋಗಕ್ಕೆ ಸಿಎಂ ಬಿಎಸ್ವೈ ವರದಿ ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಅಸ್ಪೃಶ್ಯ ಜಾತಿಗಳ ಒಕ್ಕೂಟದ ಅಧ್ಯಕ್ಷ ಎಸ್.ಎಚ್.ಲೊಟಗೇರಿ ಆಗ್ರಹಿಸಿದರು.
ತಾಲೂಕಿನ ನಾಗರಬೆಟ್ಟದಲ್ಲಿ ಮಾತನಾಡಿದ ಅವರು, ಅನಾದಿ ಕಾಲದಿಂದಲೂ ಮೂಲ ಅಸ್ಪೃಶ್ಯರು ಸಮಾಜದಲ್ಲಿ ಶೋಷಣೆಗೊಳಗಾಗುತ್ತಾ ಬಂದಿದ್ದಾರೆ. ಇಂದಿಗೂ ಗ್ರಾಮೀಣ ಪ್ರದೇಶದಲ್ಲಿ ಹಲವು ಅನಿಷ್ಠ ಪದ್ಧತಿಗಳಿಂದ ತೊಂದರೆಗೊಳಗಾಗುತ್ತಿದ್ದಾರೆ.
ಹೀಗಾಗಿ ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳನ್ನ ಎಸ್ಸಿ ಪಟ್ಟಿಗೆ ಸೇರಿಸಿರುವುದು ಅವೈಜ್ಞಾನಿಕವಾಗಿದೆ. ಕೂಡಲೇ ಈ ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ಕೈ ಬಿಡಬೇಕು ಎಂದು ಪಿಡಿಓ ವೀರೇಶ ಹೂಗಾರ ಅವರ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.