ಮುದ್ದೇಬಿಹಾಳ : ರಾಜ್ಯ ಬಿಜೆಪಿ ಸರಕಾರ ದೋಚುವುದಕ್ಕೆಂದೆ ಅಧಿಕಾರಕ್ಕೆ ಬಂದಿದೆ. ಕಿಕ್ ಬ್ಯಾಕ್ ಪ್ರಕರಣಗಳನ್ನು ಸಿಬಿಐ ತನಿಖೆಗೊಳಪಡಿಸದೇ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿಗಳನ್ನು ನೇಮಿಸಿ ತನಿಖೆ ಕೈಗೊಂಡು ಸತ್ಯವನ್ನು ಜನರ ಎದುರು ಬಹಿರಂಗಗೊಳಿಸಬೇಕು ಎಂದು ಮಾಜಿ ಶಾಸಕ ಸಿ ಎಸ್ ನಾಡಗೌಡ ಅಪ್ಪಾಜಿ ಆಗ್ರಹಿಸಿದರು.
ಪಟ್ಟಣದ ಹೊರವಲಯದಲ್ಲಿ ಖಾಸಗಿ ಲೇಔಟನಲ್ಲಿ ಕಾಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದಂದು ಶನಿವಾರ ಸಸಿ ನೆಟ್ಟು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿ ಕುಟುಂಬದ ವಿರುದ್ಧ ಅವರ ಪಕ್ಷದ ನಾಯಕರೇ ಟೀಕಿಸುತ್ತಿದ್ದಾರೆ. ನೀರಾವರಿ ಇಲಾಖೆಯಲ್ಲಿ ಕೋಟ್ಯಂತರ ರೂ. ಕಿಕ್ ಬ್ಯಾಕ್ ಸಂದಾಯವಾಗಿದೆ ಎಂದು ಹೇಳುತ್ತಿದ್ದಾರೆ.
ಜಿಂದಾಲ್ ಕಂಪನಿಯಿಂದಲೂ ಕಿಕ್ ಬ್ಯಾಕ್ ಪಡೆದುಕೊಳ್ಳಲಾಗಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರ ರಾಜ್ಯದ ಜನರ ಹಿತ ಕಾಯುವ ಬದಲು ದೋಚಲು ಇಳಿದಿದೆ ಎಂದು ದೂರಿದರು. ಈ ಕಿಕ್ ಬ್ಯಾಕ್ ಪ್ರಕರಣಗಳನ್ನು ಸಿಬಿಐ ತನಿಖೆಗೊಳಪಡಿಸದೇ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಥವಾ ಹಾಲಿ ನ್ಯಾಯಮೂರ್ತಿಗಳನ್ನು ನೇಮಿಸಿ ತನಿಖೆ ಕೈಗೊಂಡು ಸತ್ಯವನ್ನು ಜನರ ಎದುರು ಬಹಿರಂಗಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ವಾಯ್ ಹೆಚ್ ವಿಜಯಕರ್, ಎನ್‌ಎಸ್‌ಯೂಐ ಜಿಲ್ಲಾಧ್ಯಕ್ಷ ಸದ್ದಾಂ ಕುಂಟೋಜಿ, ಯುವ ಕಾಂಗ್ರೆಸ್ ಅಧ್ಯಕ್ಷ ಮಹ್ಮದ್ ರಫೀಕ್ ಶಿರೋಳ, ಪುರಸಭೆ ಸದಸ್ಯರು, ಮಾಜಿ ಸದಸ್ಯರು ಮೊದಲಾದವರು ಇದ್ದರು.