ವಿಜಯಪುರ: ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿ, ಫಲಿತಾಂಶ ಬಂದ ಮೇಲೆ ಮೈತ್ರಿ ಮುರಿದು ಬಿದ್ದಿರುವುದು ದೇಶದ ಇತಿಹಾಸದಲ್ಲೇ ಇದೇ ಮೊದಲು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಬಿಜೆಪಿ ಹೊಂದಾಣಿಕೆ ವಿಚಾರವಾಗಿ ಮಾತನಾಡಿದ ಅವರು, ಸರ್ವಾಧಿಕಾರಿ ಧೋರಣೆ ಇರುವ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿ ಈಗ ಮೈತ್ರಿಯಿಂದ ಹೊರಬಂದಿದೆ ಎಂದರು.
ಮಹಾರಾಷ್ಟ್ರದಲ್ಲಿನ ಬೆಳವಣಿಗೆಗಳ ಕುರಿತು ಎಐಸಿಸಿ ತೀರ್ಮಾನ ಮಾಡಲಿದೆ ಬಿಜೆಪಿ ಕೋಮುವಾದಿ ಅಷ್ಟೆ ಅಲ್ಲ, ಅದು ಸರ್ವಾಧಿಕಾರಿ ಪಕ್ಷ ಎಂದು ವಾಗ್ದಾಳಿ ನಡೆಸಿದರು.