ವಿಜಯಪುರ: ಕೆಎಸ್ಆರ್ಟಿಸಿ ನೌಕರನೋರ್ವ ಕೌಟುಂಬಿಕ ಕಲಹ ಹಿನ್ನೆಲೆ ಕೆನಾಲ್ಗೆ ಹಾರಿ, ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.
ಗಂಗಾಧರ ಕೃಷ್ಣಪ್ಪ ಬಡಿಗೇರ ಆತ್ಮಹತ್ಯೆ ಮಾಡಿಕೊಂಡಿರುವ ನೌಕರ. ಇವರಿಗೆ ಆರು ಜನ ಹೆಣ್ಣು ಮಕ್ಕಳಿದ್ದರೂ ಎಂದು ತಿಳಿದು ಬಂದಿದೆ. ಭೈರವಡಗಿ ಗ್ರಾಮದ ಹತ್ತಿರ ಚಿಮ್ಮಲಗಿ ಏತ ನೀರಾವರಿ ಕಾಲುವೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಬಸವನ ಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ತಾಯಿಯ ಸಾವಿನಿಂದ ಮನನೊಂದು ಮಗ ಆತ್ಮಹತ್ಯೆ: ಕೆರೆಯಲ್ಲಿ ಶವ ಪತ್ತೆ