ಮುದ್ದೇಬಿಹಾಳ : ಬಹುಗ್ರಾಮ ಕುಡಿವ ನೀರು ಪೂರೈಕೆ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾಗರಬೆಟ್ಟ ಬಹುಗ್ರಾಮ ಕುಡಿವ ನೀರಿನ ಯೋಜನೆಯ ಸ್ಥಾವರದ ಎದುರಿಗೆ ನೌಕರರು ಸಾಂಕೇತಿಕ ಧರಣಿ ನಡೆಸಿದರು.
ಕಾರ್ಮಿಕರ ದಿನಾಚರಣೆಯ ಅಂಗವಾಗಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಎದುರಿಗೆ ಇರಿಸಿರುವ ನೌಕರರು ಲಾಕ್ಡೌನ್ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೌಕರರು ಜೀವ ಪಣಕ್ಕಿಟ್ಟು ಸೇವೆ ಮಾಡುತ್ತಿದ್ದೇವೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ತಿಳಿಸಿದರು.
ಗುತ್ತಿಗೆ ಪದ್ಧತಿ ರದ್ಧುಗೊಳಿಸಬೇಕು. ಪಿಎಫ್ ಮತ್ತು ಇಎಸ್ಐ ಪ್ರಕಾರ ಭರಿಸಬೇಕು.12 ಗಂಟೆ ಕೆಲಸದ ಬದಲು 8 ಗಂಟೆ ಮಾತ್ರ ನಿಗದಿ ಮಾಡಬೇಕು. ಕನಿಷ್ಠ 21 ಸಾವಿರ ರೂ. ವೇತನ ನೀಡಬೇಕು ಎಂದು ಆಗ್ರಹಿಸಿದ್ದಾರೆ.