ರಾಯಚೂರಿನ ಜಿಲ್ಲಾ ಪಂಚಾಯತ್ನಿಂದ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯಾಗಿದೆ. 6 ತಾಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 22 ಹುದ್ದೆಗಳ ಭರ್ತಿಗೆ ನಿರ್ಧರಿಸಲಾಗಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ: ರಾಯಚೂರು- 4, ಸಿಂಧನೂರು- 4, ಮಸ್ಕಿ- 4, ದೇವದುರ್ಗ- 5, ಲಿಂಗಸೂಗೂರು 4, ಸಿರವಾರ 1.
ವಿದ್ಯಾರ್ಹತೆ: ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾತಿ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷದವರೆಗೆ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ: ಮೆರಿಟ್ ಆಧಾರದ ಮೇಲೆ ದಾಖಲಾತಿ ಪರಿಶೀಲನೆಯ ಬಳಿಕ ಅಭ್ಯರ್ಥಿಗಳ ಆಯ್ಕೆ.
ವಿಶೇಷ ಸೂಚನೆ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ತಹಶೀಲ್ದಾರ್ ಅವರಿಂದ ಪ್ರಮಾಣ ಪತ್ರ ಪಡೆದು ಅರ್ಜಿ ಸಲ್ಲಿಕೆ ವೇಳೆ ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ ಪ್ರಮಾಣಪತ್ರ, ಜಾತಿ ಮೀಸಲಾತಿ, ಸ್ಥಳೀಯ ನಿವಾಸಿ ಸೇರಿದಂತೆ ಅಗತ್ಯ ದಾಖಲಾತಿ ಹೊಂದಿರಬೇಕು.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂ, ಪ್ರವರ್ಗ 2 ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 200 ರೂ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ಪಾವತಿ ಮಾಡಬಹುದು.
ಅಕ್ಟೋಬರ್ 18ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 10 ಆಗಿದೆ. ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ zpraichuru.karnataka.gov.in/kn ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: Job Alert: ವಿಜಯಪುರ ಜಿಲ್ಲಾ ಪಂಚಾಯತ್ನಿಂದ ನೇಮಕಾತಿ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ