ವಿಜಯಪುರ: ಸಿಡಿಲು ಬಡಿದು ತಾಯಿ ಹಾಗೂ ಮಗಳು ಸಾವನ್ನಪ್ಪಿ, ಪತಿಗೆ ಗಾಯವಾದ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಕಡಕೋಳ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.
ಮಹಾದೇವಿ ಭಜಂತ್ರಿ (43), ಮಗಳು ಸೋನಿ ಭಜಂತ್ರಿ (12) ಸಿಡಿಲಿಗೆ ಬಲಿಯಾದವರು. ಮಹಾದೇವಿ ಪತಿ ಯಂಕಪ್ಪಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬಸವನಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.