ETV Bharat / state

ರಸ್ತೆ ಅಗಲೀಕರಣಕ್ಕೆ ಗ್ರಾಮದ ಕೆಲವರಿಂದ ಅಡ್ಡಗಾಲು.. ಕ್ರಮಕ್ಕೆ ಆಗ್ರಹಿಸಿದ ಸ್ಥಳೀಯರು - Sewerage, CC Road Construction Works

ಗ್ರಾಮ ಪಂಚಾಯಿತಿಯ ದಾಖಲೆಯನ್ನು ಪರಿಶೀಲನೆ ನಡೆಸಿ ಅಕ್ರಮವಾಗಿ ಕಟ್ಟಿದ ಆಸ್ತಿಯನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಿ ಊರಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ..

locals demanded to take action for those who interrupt road construction
ರಸ್ತೆ ಅಗಲೀಕರಣಕ್ಕೆ ಗ್ರಾಮದ ಕೆಲವರಿಂದ ಅಡ್ಡಗಾಲು...ಕ್ರಮಕ್ಕೆ ಆಗ್ರಹಿಸಿದ ಸ್ಥಳೀಯರು
author img

By

Published : Jul 14, 2020, 10:12 PM IST

ಮುದ್ದೇಬಿಹಾಳ (ವಿಜಯಪುರ): ತಾಲೂಕಿನ ಇಂಗಳಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಮ್ಮಲದಿನ್ನಿ ಗ್ರಾಮದ ಬಸವೇಶ್ವರ ವೃತ್ತದಿಂದ ಸೊಸೈಟಿಯವರೆಗೆ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಕೆಲವರು ಅಡ್ಡಿಪಡಿಸುತ್ತಿದ್ದು, ಅವರ ವಿರುದ್ಧ ಕ್ರಮಕೈಗೊಂಡು ರಸ್ತೆಯನ್ನು ಅಗಲೀಕರಣಗೊಳಿಸಿ ಅಭಿವೃದ್ಧಿಪಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಸ್ತೆ ಅಗಲೀಕರಣಕ್ಕೆ ಗ್ರಾಮದ ಕೆಲವರಿಂದ ಅಡ್ಡಗಾಲು, ಕ್ರಮಕ್ಕೆ ಆಗ್ರಹಿಸಿದ ಸ್ಥಳೀಯರು

ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಗ್ರಾಮ ಪಂಚಾಯತ್‌ ದಾಖಲೆಯನ್ನು ಪರಿಶೀಲನೆ ನಡೆಸಿ ಅಕ್ರಮವಾಗಿ ಕಟ್ಟಿದ ಆಸ್ತಿಯನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಿ ಊರ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಕುರಿತು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ತಹಶೀಲ್ದಾರ್‌ರಿಗೂ ಅರ್ಜಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ. ಗ್ರಾಮಸ್ಥರಾದ ಚನ್ನಬಸಪ್ಪ ಮಂಗ್ಯಾಳ,ಬಸವರಾಜ ಅಂಗಡಗೇರಿ,ಬಸರೆಡ್ಡಿ ಮಂಗ್ಯಾಳ, ವಿ ಬಿ ಹಡಪದ, ನಿಂಗಪ್ಪ ಇಂಗಳಗೇರಿ, ಬಸಪ್ಪ ಸರೂರ, ಬಿ ಎಸ್ ಮಂಗ್ಯಾಳ, ಮನವಿ ಪತ್ರಕ್ಕೆ ಸಹಿ ಮಾಡಿದ್ದು, ಕೂಡಲೇ ಈ ಸಮಸ್ಯೆ ಸರಿಪಡಿಸಿ ಕೆಲಸ ಆರಂಭಿಸುವಂತೆ ಒತ್ತಾಯಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.