ಮುದ್ದೇಬಿಹಾಳ: ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಅವರ ತಂದೆ ಸಂಗನಗೌಡ ಭೀಮನಗೌಡ ಪಾಟೀಲ್ (98) ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ವಿಜಯಪುರದ ಬಿಎಲ್‌ಡಿಇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಪತ್ನಿ ಚನ್ನಮಗೌಡತಿ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು - ಬಳಗವನ್ನು ಮೃತರು ಅಗಲಿದ್ದಾರೆ. ಸಂಗನಗೌಡರು ಮುದ್ದೇಬಿಹಾಳ ತಾಲೂಕಿನ ಪಡೇಕನೂರ ಗ್ರಾಮದ ಪ್ರಗತಿ ಪರ ರೈತರಾಗಿದ್ದರು. ಕಳೆದ ಕೆಲವು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆ.11ರಂದು ಮಧ್ಯಾಹ್ನ ಪಡೇಕನೂರ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಮಾಜಿ ಸಚಿವ ಎಂ.ಬಿ.ಪಾಟೀಲ, ಮಾಜಿ ಸಚಿವ ಸಿ.ಎಸ್.ನಾಡಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.