ETV Bharat / state

ವಿಜಯಪುರ: ಕೆಬಿಜೆಎನ್​ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ - Lokayukta

ವಿಜಯಪುರದ ಆಲಮಟ್ಟಿ ಕೆಬಿಜೆಎನ್​ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

Lokayukta raid
ಕೆಬಿಜೆಎನ್​ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ
author img

By ETV Bharat Karnataka Team

Published : Nov 18, 2023, 11:26 AM IST

Updated : Nov 18, 2023, 11:45 AM IST

ವಿಜಯಪುರ: ಆಲಮಟ್ಟಿ ಕೆಬಿಜೆಎನ್​ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ಪ ಮಂಜಿನಾಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಜಯಪುರ ಲೋಕಾಯುಕ್ತ ಎಸ್ಪಿ ಹನುಮಂತರಾಯಪ್ಪ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುರೇಶ್ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡವು ಆಲಮಟ್ಟಿಯ ರೂಮ್​ವೊಂದರಲ್ಲಿ ವಾಸವಾಗಿದ್ದ ಎಇಇ ಮೇಲೆ ದಾಳಿ ಮಾಡಿ ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೆಬಿಜೆಎನ್​ಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗುತ್ತಿಗೆದಾರನಿಗೆ ಬಿಲ್ ಮಂಜೂರಾತಿಗೆ 16 ಲಕ್ಷ ರೂ. ಲಂಚ ಕೇಳಿದ್ದರು. ಆರಂಭದಲ್ಲಿ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿ ಗುತ್ತಿಗೆದಾರ ಅಭಿಷೇಕ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಲೋಕಾಯುಕ್ತ ದಾಳಿ ನಡೆದಿದೆ. ಎಇಇ ಕಾರು ಚಾಲಕನನ್ನು ಕೂಡ ಲೋಕಾಯುಕ್ತ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಹಾಸ್ಟೆಲ್​ ಆಹಾರ ಪೂರೈಕೆಯಲ್ಲಿ ವ್ಯತ್ಯಯ ಆರೋಪ: ವಿದ್ಯಾರ್ಥಿಗಳಿಂದ ವಿಜಯಪುರ ಡಿಸಿ ಮನೆಗೆ ಮುತ್ತಿಗೆ

Last Updated : Nov 18, 2023, 11:45 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.