ವಿಜಯಪುರ : ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಹಾಳ ಬಳಿಯ ಎನ್‌ಹೆಚ್-50ರಲ್ಲಿ ಲಾರಿ ಹಾಗೂ ಕ್ಯಾಂಟರ್ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ವಿಜಯಪುರದಿಂದ ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಕ್ಯಾಂಟರ್ ಹಾಗೂ ಹುಬ್ಬಳ್ಳಿಯಿಂದ ವಿಜಯಪುರ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಈ ಅಪಘಾತ ನಡೆದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕ್ಯಾಂಟರ್ನೊಳಗೆ ಸಿಲುಕಿದ್ದ ಶವಗಳನ್ನು ಹೊರ ತೆಗೆಯುವ ಕಾರ್ಯ ಮಾಡಿದ್ದಾರೆ.
ಮಹಾರಾಷ್ಟ್ರ ನೋಂದಣಿಯ MH 13 AX 4999 ನಂಬರಿನ ಕ್ಯಾಂಟರ್ನಲ್ಲಿದ್ದ ಐದಕ್ಕೂ ಹೆಚ್ಚು ಎಮ್ಮೆಗಳು ಮೃತಪಟ್ಟಿವೆ. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ )ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ