ವಿಜಯಪುರ: ಬೈಕ್ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಜನ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ಬೆಳಗ್ಗೆ ಈ ಅವಘಢ ಸಂಭವಿಸಿದ್ದು, ಆಲಮಟ್ಟಿಯ ಮುಖ್ಯ ಎಂಜಿನಿಯರ್ ಕಚೇರಿಯ ಸಿಪಾಯಿ ಜಮಲಪ್ಪ ಲಮಾಣಿ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇನ್ನು ಸ್ಥಳೀಯರು ರಸ್ತೆ ತಡೆದು ಪ್ರತಿಭಟನೆ ನಡೆಸಿ, ನಿಡಗುಂದಿ ಪಟ್ಟಣದಲ್ಲಿ ಸ್ಪೀಡ್ ಬ್ರೇಕರ್(ರೋಡ್ ಹಂಪ್ಸ್) ಹಾಕುವಂತೆ ಆಗ್ರಹಿಸಿದರು.
ಇನ್ನು, ಪದೇ ಪದೇ ಅಪಘಾತಗಳು ಸಂಭವಿಸುತ್ತಿದ್ದು, ರೋಡ್ ಹಂಪ್ಸ್ ಹಾಕುವಂತೆ ಪ್ರತಿಭಟನಾನಿರತರು ಒತ್ತಾಯಿಸಿದರು.