ವಿಜಯಪುರ: ನಗರದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಈ ಘಟನೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೈಕ್ ಸವಾರ ಶಶಿಧರ ಕಮತಗಿ ಸಾವನ್ನಪ್ಪಿರುವ ವ್ಯಕ್ತಿ. ಈತ ವಿಜಯಪುರ ತಾಲೂಕಿನ ಮಧಬಾವಿ ನಿವಾಸಿ. ಮೃತನಿಗೆ ಮದುವೆಯಾಗಿ ಕೇವಲ 4 ತಿಂಗಳು ಕಳೆದಿತ್ತು. ಶಶಿಧರ ಇದೇ ಇಂಡಸ್ಟ್ರಿಯಲ್ ಏರಿಯಾದಲ್ಲಿ ಕೆಲಸ ಮಾಡುತ್ತಿದ್ದರು. ಈತ ಪ್ರತಿದಿನ ಬೈಕ್ ಮೇಲೆ ಮಧಬಾವಿ ಗ್ರಾಮಕ್ಕೆ ಹೋಗಿ ಬರುತ್ತಿದ್ದರು ಎಂದು ತಿಳಿದು ಬಂದಿದೆ.
ವಿಜಯಪುರ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.