ETV Bharat / state

ಉಕ್ರೇನ್​ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂ.ಬಿ.ಪಾಟೀಲ ನೆರವು

ಕೇವಲ ಉಕ್ರೇನ್​ನಿಂದ ಆಗಮಿಸಿದ ವಿಜಯಪುರ ಜಿಲ್ಲೆಯ 17 ವಿದ್ಯಾರ್ಥಿಗಳು ಅಲ್ಲದೇ, ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಹಾಗೂ ಸದ್ಯ ಲಾಕ್‍ಡೌನ್ ಕಾರಣದಿಂದ ಇಲ್ಲಿಯೇ ಉಳಿದಿರುವ ಐದು ವಿದ್ಯಾರ್ಥಿಗಳಿಗೂ ಕೂಡ ಪ್ರತ್ಯೇಕ ಕ್ಲಾಸ್‍ಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

M B PATIL
ಉಕ್ರೇನ್​ನಲ್ಲಿ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಎಂ. ಬಿ ಪಾಟೀಲ ಸಹಾಯಹಸ್ತ
author img

By

Published : Apr 7, 2022, 6:36 PM IST

ವಿಜಯಪುರ: ಯುದ್ಧಪೀಡಿತ ಉಕ್ರೇನ್​ನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ ದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮುಂದಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಮೂಲಕ ಅತಂತ್ರದಲ್ಲಿದ್ದ ವಿದ್ಯಾರ್ಥಿಗಳ ಪಾಲಿಗೆ ಸಹಾಯಹಸ್ತ ಚಾಚಿದೆ.

ಈ ಕುರಿತು ವಿಜಯಪುರದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಂ.ಬಿ.ಪಾಟೀಲ, ಉಕ್ರೇನ್​ನಿಂದ ಆಗಮಿಸಿದ 17 ಜನ ವೈದ್ಯ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣದ ಕುರಿತು ತಮ್ಮ ಪಾಲಕರೊಂದಿಗೆ ನನ್ನನ್ನು ಭೇಟಿ ಮಾಡಿ ನೆರವು ಕೋರಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ವಿದ್ಯಾರ್ಥಿಗಳಿಗೆ ನೆರವು ಒದಗಿಸುವುದಾಗಿ ಹೇಳಿದ್ದರೂ ಇದುವರೆಗೆ ಸ್ಪಷ್ಟ ನೀತಿ ಜಾರಿಯಾಗಿಲ್ಲ ಎಂದರು.

ಇದರಿಂದ ವಿದ್ಯಾರ್ಥಿಗಳು ಗೊಂದಲಕ್ಕಿಡಾಗಿದ್ದು, ಶೈಕ್ಷಣಿಕವಾಗಿ ಅತಂತ್ರರಾಗಿದ್ದಾರೆ. ಮನೆಯಲ್ಲಿಯೇ ಖಾಲಿ ಕುಳಿತುಕೊಳ್ಳುವುದು ಬೇಡ. ಈ ವಿದ್ಯಾರ್ಥಿಗಳು ಇಂದಿನಿಂದಲೇ ಬಿ.ಎಲ್.ಡಿ.ಇ ಡೀಮ್ಡ್ ವಿವಿ ವ್ಯಾಪ್ತಿಯ ಬಿ. ಎಂ ಪಾಟೀಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತಮ್ಮ ಶಿಕ್ಷಣ ಮುಂದುವರೆಸಲು ಎಲ್ಲಾ ಏರ್ಪಾಡು ಮಾಡಲಾಗಿದೆ ಎಂದರು.

ಇದನ್ನೂ ಓದಿ: ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ದೆಹಲಿ ಯಾತ್ರೆ ಫಲಪ್ರದ: ಸಿಎಂ ಬೊಮ್ಮಾಯಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.