ವಿಜಯಪುರ: ದೇವರ ಹಿಪ್ಪರಗಿ ನಗರದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದರು.
ಮಿನಿ ವಿಧಾನಸೌಧವನ್ನು ದೇವರಹಿಪ್ಪರಗಿಯ ಹೊರವಲಯದಲ್ಲಿನ ಪಡಗನೂರ ರಸ್ತೆಯಲ್ಲಿ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. ಆದರೆ, ಹೊರವಲಯದಲ್ಲಿ ಮಿನಿ ವಿಧಾನಸೌಧ ನಿರ್ಮಾಣ ಮಾಡುವುದರಿಂದ ಹಳ್ಳಿಯಿಂದ ಬರುವ ಜನರಿಗೆ ತೊಂದರೆಯಾಗುತ್ತದೆ. ತಹಶೀಲ್ದಾರರು ಈಗಾಗಲೇ ನಿರ್ಮಾಣ ಸಿದ್ದತೆ ಕುರಿತು ಪ್ರಸ್ತಾವನೆ ಸಲ್ಲಿಸಿದ್ದಾರೆ. ನಗರದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ರೆ ದೂರದ ಊರುಗಳಿಂದ ಬರುವ ರೈತರಿಗೆ ಅನುಕೂಲವಾಗುತ್ತದೆ ಎಂದು ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವರಿಕೆ ಮಾಡಿದರು.