ETV Bharat / state

ವಿಜಯಪುರ: ರಸ್ತೆ ಅಪಘಾತದಲ್ಲಿ ಬೈಕ್​ ಸವಾರ ಸಾವು, ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿ - ETV Bharath Kannada news

ವಿಜಯಪುರ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಘಟನೆ - ವ್ಯಕ್ತಿ ಆತ್ಮಹತ್ಯೆ - ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಸಾವು

Etv BharatThieves fled after stealing money and jewellery
ವಿಜಯಪುರ:ರಸ್ತೆ ಅಪಘಾತದಲ್ಲಿ ಬೈಕ್​ ಸಾವರ ಸಾವು, ಹಣ ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿ
author img

By

Published : Feb 27, 2023, 4:04 PM IST

ವಿಜಯಪುರ: ಕೃಷ್ಣಾ ನದಿಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ-ಬಾಗಲಕೋಟೆ ಜಿಲ್ಲೆಯ ಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಹೆಸರು ಮತ್ತು ವಿವರಗಳು ಲಭ್ಯವಾಗಿಲ್ಲ. ವ್ಯಕ್ತಿ ವಿಜಯಪುರದಿಂದ ಬಾಡಿಗೆ ವಾಹನ ಮಾಡಿಕೊಂಡು ಕೊಲ್ಹಾರ ಬ್ರಿಡ್ಜ್ ಬಳಿ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು, ಸ್ಥಳಕ್ಕೆ ಕೊಲ್ಹಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಮೃತದೇಹಕ್ಕಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದಾರೆ.

ರಸ್ತೆ ಅಪಘಾತದಲ್ಲಿ ಬೈಕ ಸವಾರ ಸಾವು: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ.‌ ಮಹಾಂತೇಶ್ ಬೆಳ್ಳಪ್ಪ ಕುಂಬಾರ (38) ಮೃತಪಟ್ಟ ವ್ಯಕ್ತಿ.‌ ಇಂಡಿಯಿಂದ ಮಿರಗಿಗೆ ಹೊರಟಿದ್ದ ಬಸ್‌ ಸಾಲೋಟಗಿಯಿಂದ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಣಿ ಕಳ್ಳತನ: ಇಂಡಿಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಹಣ ಹಾಗೂ ಚಿನ್ನಾಭರಣ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ.‌ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದಲ್ಲಿ ಬೀಗ ಮುರಿದು ಸುಮಾರು 20 ತೊಲೆ ಚಿನ್ನ ದೋಚಿದ್ದಲ್ಲದೇ, ದೇವಸ್ಥಾನ ಹತ್ತಿರದ ಪರಶುರಾಮ ಬಂಗಾರಿ ಎಂಬುವವರ ಮನೆಯಲ್ಲಿದ್ದ 80 ಸಾವಿರ ರೂಪಾಯಿ ಹಣ ಕಳ್ಳತನ ಮಾಡಿದ್ದಾರೆ. ಬೀರೇಶ್ವರ ದೇವಸ್ಥಾನ, ಮತ್ತೊಂದು ಮನೆಯ ಬೀಗ ಮುರಿದಿದ್ದು ಕಳ್ಳತನ ಯತ್ನ ನಡೆಸಲಾಗಿದೆ. ಈ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಅಪಾರ್ಟ್​ಮೆಂಟ್​ನ ಫ್ಲಾಟ್​ನಲ್ಲಿ ಚಿನ್ನದ ವ್ಯಾಪಾರಿ ಮತ್ತವರ ಪತ್ನಿ, ಮಗಳ ಕೊಳೆತ ಶವ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.