ವಿಜಯಪುರ : ಕುಡಿಯಲು ಹಣ ನೀಡಲಿಲ್ಲ ಎಂದು ಮನೆ ಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಶವವಾಗಿ ಪತ್ತೆಯಾಗಿರುವ ಘಟನೆ ಅಬಕಾರಿ ಕಚೇರಿ ಬಳಿ ನಡೆದಿದೆ.
ನಗರದ ಚಪ್ಪರಬಂದ್ ಕಾಲೋನಿಯ ನಿವಾಸಿ ನಬೀರ್ ರಸೂಲ್ ನರಸಂಗಿ (28) ಶವವಾಗಿ ಪತ್ತೆಯಾದ ವ್ಯಕ್ತಿಯಾಗಿದ್ದಾನೆ. ನಗರದ ಅಬಕಾರಿ ಕಚೇರಿ ಸಮೀಪದಲ್ಲಿ ನಬೀರ್ ಶವ ಪತ್ತೆಯಾಗಿದೆ. ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಶವ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಹಣದ ವಿಚಾರ: ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಕೊನೆ!
ಕುಡಿಯಲು ಹಣ ಕೇಳಿ ಕೊಡದೆ ಇದ್ದಾಗ ನಿನ್ನೆ ಮನೆ ಬಿಟ್ಟು ನಬೀರ್ ತೆರಳಿದ್ದನು. ಈಗ ಶವವಾಗಿ ಪತ್ತೆಯಾಗಿದ್ದಾನೆ. ನಿನ್ನೆ ಗೆಳೆಯರ ಜೊತೆಗೆ ತೆರಳಿದ್ದ ಎನ್ನಲಾಗಿದೆ. ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.